
ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳೂರಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಗೋಹತ್ಯೆ ನಿಷೇಧ ಕಾಯ್ದೆ ತರುವ ಅವಶ್ಯಕತೆ ಇರಲಿಲ್ಲ. ಈಗಾಗಲೇ ಈ ಕಾಯ್ದೆ ರಾಜ್ಯದಲ್ಲಿದೆ. ನಮಗೆಲ್ಲಾ ಗೋವಿನ ಬಗ್ಗೆ ಗೌರವ ಇದೆ, ಅದಕ್ಕೆ ರಕ್ಷಣೆ ಕೊಡುತ್ತಿದ್ದೇವೆ. ಆದರೆ ಸುಖಾಸುಮ್ಮನೆ ಅಶಾಂತಿ ಸೃಷ್ಟಿಸುವ ಪ್ರಯತ್ನವಾಗಿದೆ. ಇದೊಂದು ಕೆಟ್ಟ ಪಾಲಿಟಿಕ್ಸ್ ಆಗಿದೆ ಎಂದು ಕಿಡಿಕಾರಿದ್ದಾರೆ.