Header Ads
Breaking News

ಛಿದ್ರಗೊಂಡ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ : ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ

ಕುಂದಾಪುರ: ಯುವತಿಯೊಬ್ಬಳು ನೀಡಿದ ದೂರು ಅರ್ಜಿಯ ಹಿನ್ನೆಲೆ ಯುವಕನೋರ್ವನನ್ನು ವಿಚಾರಣೆಗೆಂದು ಪೊಲೀಸ್ ರು ಠಾಣೆಗೆ ಕರೆಸಿ ವಿಚಾರಣೆ ನಡೆಸಿ ಮನೆಗೆ ಕಳುಹಿಸಿದ ಬಳಿಕ ರೈಲ್ವೆ ಹಳಿಯ ಮೇಲೆ ಛಿದ್ರಗೊಂಡ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆಯಾದ ಕಳವಳಕಾರಿ ಘಟನೆ ಬೈಂದೂರು  ಪೊಲೀಸ್  ಠಾಣಾ ವ್ಯಾಪ್ತಿಯ ನಾಗೂರಿನಲ್ಲಿ ನಡೆದಿದೆ. ಕಿರಿಮಂಜೇಶ್ವರ ಶಾಲೆಬಾಗಿಲು ನಿವಾಸಿ ರಾಮ ಪೂಜಾರಿ(32) ಸಾವನ್ನಪ್ಪಿದ ದುರ್ದೈವಿ. ಯುವಕನ ಕುಟುಂಬಿಕರು ಆಕ್ರೋಷ ವ್ಯಕ್ತಪಡಿಸಿ ಮಂಗಳವಾರ ಮಧ್ಯಾಹ್ನ 2 ಗಂಟೆಯವರೆಗೂ ಶವವನ್ನು ರೈಲು ಹಳಿ ಪಕ್ಕವೇ ಇಟ್ಟು ನ್ಯಾಯಕ್ಕಾಗಿ ಪ್ರತಿಭಟನೆ ನಡೆಸಿದ್ದಾರೆ.ಉಡುಪಿ ಹೆಚ್ಚುವರಿ ಎಸ್ಪಿ ಕುಮಾರಚಂದ್ರ ಅವರು ಸಮಗ್ರ ತನಿಖೆ ನಡೆಸಿ ಸೂಕ್ತ ನ್ಯಾಯ ಕೊಡಿಸುವ ಭರವಸೆಯನ್ನು ನೀಡಿದ ಬಳಿಕ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಯಿತು.

ಕಾನೂನು ಕೈಗೆತ್ತಿಕೊಂಡ  ಪೊಲೀಸ್ ರ ವಿರುದ್ಧ ಕ್ರಮಕೈಗೊಳ್ಳಬೇಕು. ರಾಮ ಪೂಜಾರಿ ವಿರುದ್ಧ ದೂರು ನೀಡಿದವರ ಪೂರ್ವಾಪರ ವಿಚಾರಣೆ ನಡೆಸಬೇಕು. ರಾಮ ಪೂಜಾರಿಯದ್ದು ಆತ್ಮಹತ್ಯೆಯೇ ಆಗಿದ್ದರೆ ಅದಕ್ಕೆ ಪ್ರಚೋದನೆ ನೀಡಿದವರ ಮೇಲೆ ಕ್ರಮವಾಗಬೇಕು. ತಮಗೆ ಸೂಕ್ತ ನ್ಯಾಯ ಒದಗಿಸುವವರೆಗೂ ಶವವನ್ನು ತೆಗೆಯುವುದಿಲ್ಲ ಎಂದು ಕುಟುಂಬಿಕರು ಒಅಟ್ಟು ಹಿಡಿದರು. ಇಲಾಖಾ ತನಿಖೆ ನಡೆಸಿ ಸೂಕ್ತ ಕ್ರಮಕೈಗೊಳ್ಳುವ ಭರವಸೆಯನ್ನು ಹೆಚ್ಚುವರಿ ಎಸ್ಪಿ ಕುಮಾರಚಂದ್ರ ಅವರು ನೀಡಿದ ಬಳಿಕ ಮಧ್ಯಾಹ್ನ 2.30ರ ಸುಮಾರಿಗೆ ಶವವನ್ನು ಆಂಬುಲೆನ್ಸ್ ಮೂಲಕ ಘಟನಾ ಸ್ಥಳದಿಂದ ಆಸ್ಪತ್ರೆಗೆ ರವಾನಿಸಲಾಯಿತು.

Related posts

Leave a Reply

Your email address will not be published. Required fields are marked *