Header Ads
Breaking News

ಜಲಜಾಗೃತಿ ಮತ್ತು ಅಂತರ್ಜಲ ಮಟ್ಟ ಹೆಚ್ಚಳಕ್ಕೆ ಆದ್ಯತೆ; ಕೆ.ರಾಧಾಕೃಷ್ಣ ಬೋರ್ಕರ್

ಪುತ್ತೂರು; ಮಳೆನಾಡು ಕರಾವಳಿಯಲ್ಲೂ ಇಂದು ನೀರಿನ ಬರದ ಅಪಾಯ ಗೋಚರಿಸುತ್ತಿದ್ದು, ಪ್ರವಾಹ ಬರುವಷ್ಟು ಪ್ರಮಾಣದಲ್ಲಿ ನದಿಗಳು ತುಂಬಿ ಹರಿದರೂ ಬೇಸಿಗೆ ಕಾಲದಲ್ಲಿ ಜಲಸಂಪನ್ಮೂಲದ ಕೊರತೆಯನ್ನು ನಾವು ಎದುರಿಸುತ್ತಿದ್ದೇವೆ. ಇದಕ್ಕಾಗಿ ಗ್ರಾಮಪಂಚಾಯಿತಿ ಮಟ್ಟದಲ್ಲಿ ಜಲಜಾಗೃತಿ ಮತ್ತು ಅಂತರ್ಜಲ ಮಟ್ಟ ಹೆಚ್ಚಿಸುವ ಕಾರ್ಯಗಳು ನಡೆಯಬೇಕು. ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಹೆಚ್ಚಿನ ಜವಾಬ್ದಾರಿ ವಹಿಸಬೇಕು ಎಂದು ಪುತ್ತೂರು ತಾಪಂ ಅಧ್ಯಕ್ಷ ಕೆ.ರಾಧಾಕೃಷ್ಣ ಬೋರ್ಕರ್ ಹೇಳಿದರು.

ಶುಕ್ರವಾರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಅಂತರ್ಜಲ ನಿರ್ದೇಶನಾಲಯ ಮತ್ತು ಜಿಲ್ಲಾ ಅಂತರ್ಜಲ ಕಚೇರಿ ಆಶ್ರಯದಲ್ಲಿ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಿಗೆ ಏರ್ಪಡಿಸಲಾದ ಅಂತರ್ಜಲ ಕಾಯಾಗಾರವನ್ನು ಅವರು ಉದ್ಘಾಟಿಸಿದರು. ಜನತೆಗೆ ನೀರಿನ ಮಹತ್ವ ಇನ್ನೂ ಸಮರ್ಪಕವಾಗಿ ಅರಿವಾಗಿಲ್ಲ. ನೀರಿಂಗಿಸುವ ಮತ್ತು ಮಳೆಕೊಯ್ಲು ಮತ್ತಿತರ ಚಿಂತನೆಗಳು ಅನುಷ್ಟಾನಗೊಳ್ಳುತ್ತಿಲ್ಲ. ಈಗಲಾದರೂ ನಾವು ಎಚ್ಚೆತ್ತುಕೊಳ್ಳದಿದ್ದಲ್ಲಿ ಭವಿಷ್ಯದ ದಿನಗಳಲ್ಲಿ ಜಲ ಗಂಡಾಂತರ ಕಾದಿದೆ ಎಂದು ಆತಂಕ ವ್ಯಕ್ತ ಪಡಿಸಿದ ಅವರು ಗ್ರಾಮ ಮಟ್ಟದಲ್ಲಿ ಹರಿಯುವ ನೀರಿನ ತೋಡು-ತೊರೆಗಳ ಹೂಳೆತ್ತಿಸಿ ನೀರು ನಿಲ್ಲಿಸುವ ಪ್ರಯತ್ನದ ಮೂಲಕ ಅಂತರ್ಜಲ ಮಟ್ಟ ಹೆಚ್ಚಿಸಲು ಪ್ರಯತ್ನ ಪಡಬೇಕು ಎಂದು ಸಲಹೆ ಮಾಡಿದರು. ಅಂತರ್ಜಲ ಕುರಿತ ಕೈಪಿಡಿ ಬಿಡುಗಡೆ ಮಾಡಿದ ತಾಪಂ ಉಪಾಧ್ಯಕ್ಷೆ ಲಲಿತಾ ಈಶ್ವರ್ ಬಿಡುಗಡೆಗೊಳಿಸಿದರು. ಜಿಲ್ಲಾ ಅಂತರ್ಜಲ ಕಚೇರಿಯ ಹಿರಿಯ ಭೂ ವಿಜ್ಞಾನಿ ಜಾನಕಿ ಪಿ, ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ತಾಲ್ಲೂಕು ಕಚೇರಿ ವ್ಯವಸ್ಥಾಪಕ ಶಿವಪ್ರಕಾಶ್ ಅಡ್ಪಂಗಾಯ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *