Header Ads
Header Ads
Breaking News

ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಿಫಾ ವೈರಸ್ ಭೀತಿ ಹಿನ್ನೆಲೆ : ಸಚಿವ ಯು.ಟಿ.ಖಾದರ್ ನೇತೃತ್ವದಲ್ಲಿ ಸಭೆ

ರಾಜ್ಯದೆಲ್ಲೆಡೆ ನಿಫಾ ವೈರಸ್‌ನ ಭೀತಿ ಕಾಡುತ್ತಿದೆ. ಈ ನಡುವೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೂಡ ನಿಫಾ ವೈರಸ್ ಕಾಣಿಸಿಕೊಂಡಿದ್ದು, ಜನತೆಯಲ್ಲಿ ಆತಂಕ ಮೂಡಿಸಿದೆ. ಈ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾ ಆರೋಗ್ಯ ಅಧಿಕಾರಿ ಹಾಗೂ ಖಾಸಗಿ ಆರೋಗ್ಯ ಪ್ರತಿನಿಧಿಗಳ ಜೊತೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಸಭೆ ನಡೆಸಿದ್ರು.

ಕರ್ನಾಟಕ ಗಡಿ ರಾಜ್ಯವಾದ ಕೇರಳದಲ್ಲಿ ನಿಫಾ ರೋಗ ಲಕ್ಷಣ ಕಂಡ ಬಂದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದ ಕೆಲವೊಂದು ಪ್ರದೇಶಗಳಲ್ಲಿ ಅಂದರೆ ಕರ್ನಾಟಕದ ಗಡಿಭಾಗದಲ್ಲಿರುವ ಜನರು ಆತಂತಕ್ಕೆ ಈಡಾಗಿದ್ದು, ರಾಜ್ಯಕ್ಕೂ ನಿಫಾ ರೋಗಬರಬಹುದೆಂಬ ಆತಂಕದಲ್ಲಿದ್ದಾರೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತ, ಸಚಿವ ಯು.ಟಿ.ಖಾದರ್, ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳು, ಇತರ ಹಾಗೂ ಖಾಸಗಿ ಆರೋಗ್ಯ ಪ್ರತಿನಿಧಿಗಳ ಜೊತೆಯಲ್ಲಿ ಸಭೆ ನಡೆಸಲಾಯ್ತು. ಇಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ನೇತೃತ್ವದಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿ ಸಭೆಯಲ್ಲಿ ಮಾತನಾಡಿದ ಸಚಿವರು, ನಿಫಾ ವೈರಸ್ ಬಗ್ಗೆ ಜನತೆ ಆತಂಕ ಪಡುವ ಅಗತ್ಯವಿಲ್ಲ, ಹಣ್ಣುಗಳನ್ನು ಸ್ವಚ್ಚಗೊಳಿಸಿ ತಿನ್ನಬೇಕು. ಶಿಕ್ಷಣ ಸಂಸ್ಥೆಯಲ್ಲಿ ನಿಫಾ ವೈರಸ್ ಕುರಿತು ಶಿಕ್ಷಕರು ಮಕ್ಕಳಿಗೆ ಮಾಹಿತಿ ನೀಡುವ ಮೂಲಕ ಜಾಗೃತಿ ಮೂಡಿಸಬೇಕೆಂದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಕೃಷ್ಣರಾವ್ ಮಾತನಾಡಿ, ಜಿಲ್ಲೆಯಲ್ಲಿ ಈಗಾಗಲೇ ನಿಫಾ ವೈರಸ್ ಕುರಿತು ಜನರಲ್ಲಿ ಮಾಹಿತಿ ನೀಡಲಾಗಿದೆ. ಅಲ್ಲದೇ ಕೇರಳದಿಂದ ಬರುತ್ತಿರುವ ಜನರ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್, ಜಿಲ್ಲಾ ಕಾರ್ಯನಿರ್ವಹಣಾಧಿಕಾರಿ ಡಾ.ಸೆಲ್ವಮಣಿ ಆರ್., ಮತ್ತಿತರರು ಭಾಗಿಯಾಗಿದ್ರು.

Related posts

Leave a Reply

Your email address will not be published. Required fields are marked *