Header Ads
Header Ads
Breaking News

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ನಿಟ್ಟೆ ವಿ.ವಿ ಕೆ.ಎಸ್.ಹೆಗ್ಡೆ ಆಸ್ಪತ್ರೆ ಸಹಯೋಗದಲ್ಲಿ ಪತ್ರಕರ್ತರಿಗೆ ಕ್ಷೇಮ ಹೆಲ್ತ್ ಕಾರ್ಡ್ ವಿತರಣೆ

 ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ವತಿಯಿಂದ ನಿಟ್ಟೆ ವಿಶ್ವವಿದ್ಯಾನಿಲಯದ ಕೆ.ಎಸ್.ಹೆಗ್ಡೆ ಆಸ್ಪತ್ರೆ ಸಹಯೋಗದಲ್ಲಿ ಪತ್ರಕರ್ತರಿಗೆ ಕ್ಷೇಮ ಹೆಲ್ತ್ ಕಾರ್ಡ್ ವಿತರಣಾ ಕಾರ್ಯಕ್ರಮ ಮಂಗಳೂರಿನ ಪತ್ರಿಕಾಭವನದಲ್ಲಿ ಜರುಗಿತ್ತು.

ಮಂಗಳೂರಿನ ಪತ್ರಿಕಾಭವನದಲ್ಲಿ ನಿಟ್ಟೆ ವಿಶ್ವವಿದ್ಯಾನಿಲಯ ಕುಲಪತಿ ಎನ್.ವಿನಯ್ ಹೆಗ್ಡೆ ಅವರು ಪತ್ರಕರ್ತರಿಗೆ ಕ್ಷೇಮ ಹೆಲ್ತ್ ಕಾರ್ಡ್‌ನ್ನು ವಿತರಿಸುವ ಮೂಲಕ ಚಾಲನೆ ನೀಡಿದ್ರು. ಬಳಿಕ ಮಾತನಾಡಿದ ಅವರು, ಜನರಿಗೆ ಸುದ್ಧಿ ತಲುಪಿಸುವ ಕೆಲಸವನ್ನು ಪತ್ರಕರ್ತರು ಮಾಡುತ್ತಿದ್ದಾರೆ. ಪತ್ರಕರ್ತರಿಂದ ದೇಶ ನಿಂತಿದೆ. ಪತ್ರಕರ್ತರು ನಿಪಕ್ಷಪಾತವಾಗಿ ಕೆಲಸ ಮಾಡಿದ್ರೆ, ದೇಶ ಅಭಿವೃದ್ಧಿಯಾಗಲು ಸಾಧ್ಯ ಅಂತಾ ಹೇಳಿದರು.

ನಿಟ್ಟೆ ವಿಶ್ವವಿದ್ಯಾನಿಲಯದ ಕೆ.ಎಸ್.ಹೆಗ್ಡೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಹೇಮಂತ್‌ಕುಮಾರ್ ಶೆಟ್ಟಿ ಅವರು ಕ್ಷೇಮ ಹೆಲ್ತ್ ಕಾರ್ಡ್ ಬಗ್ಗೆ ಮಾಹಿತಿ ನೀಡಿದ್ರು.

ಈ ವೇಳೆ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದ್ರಾಜೆ , ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply