Header Ads
Breaking News

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಗಿರೀಶ್ ಕಾರ್ನಾಡ್ ಇನ್ನಿಲ್ಲ

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ, ಕನ್ನಡ ಚಿತ್ರರಂಗದ ಮೇರು ಕಲಾವಿದ, ಫಿಲಂ ಫೇರ್ ಪ್ರಶಸ್ತಿ ಪುರಸ್ಕೃತ ಗಿರೀಶ್ ಕಾರ್ನಾಡ್ ಅವರು ಕಳೆದ ಕೆಲವು ತಿಂಗಳಿನಿಂದ ಅನಾರೋಗ್ಯದಿಂದ ಬಳಲ್ತಾ ಇದ್ದು, ಇಂದು ಮುಂಜಾನೆ ಬಾರದ ಲೋಕಕ್ಕೆ ಮರೆಯಾಗಿದ್ದಾರೆ. 

ಹೌದು ಕಳೆದ ಕೆಲವು ತಿಂಗಳಿನಿಂದ ಅನಾರೋಗ್ಯದಿಂದ ಬಳಲ್ತಾ ಇದ್ದ ಹಿರಿಯ ಸಾಹಿತಿ ಗಿರೀಶ್ ಕಾರ್ನಾಡ್ ಅವರು ಇಂದು ಮುಂಜಾನೆ ಬೆಂಗಳೂರಿನ ಲಾವೆಲ್ಲಾ ರಸ್ತೆಯ ನಿವಾಸದಲ್ಲಿ ಮೃತಪಟ್ಟಿದ್ದಾರೆ. ಈ ಘಟನೆ ಕನ್ನಡ ಸಾಹಿತ್ಯ ಲೋಕಕ್ಕೆ, ಕನ್ನಡ ಸಿನಿಮಾ ರಂಗಕ್ಕೆ ತುಂಬಲಾರದ ನಷ್ಟವುಂಟಾಗಿದೆ.

ರಘುನಾಥ್ ಮತ್ತು ಕೃಷ್ಣಾಬಾಯಿ ದಂಪತಿಗಳ ಮಗನಾಗಿ 1938ರ ಮೇ 19ರಂದು ಮಹಾರಾಷ್ಟ್ರದ ಮಾಥೆರನ್‌ನಲ್ಲಿ ಗಿರೀಶ್ ಕರ್ನಾಡ್ ಅವರು ಜನಿಸಿದ್ದರು. ಉತ್ತರ ಕನ್ನಡದ ಶಿರಸಿಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆದ ಅವರು ಧಾರವಾಡದಲ್ಲಿ ಪ್ರೌಢ ಶಿಕ್ಷಣ ಪಡೆದರು. ನಂತರ ಆಕ್ಸ್‌ಫರ್ಡ್ ವಿಶ್ವ ವಿದ್ಯಾಲಯದಲ್ಲಿ ಉನ್ನತ ಶಿಕ್ಷಣ ಪಡೆದಿದ್ದಾರೆ.

ಕನ್ನಡ ಸಾಹಿತ್ಯ ಮತ್ತು ನಾಟಕ ಕ್ಷೇತ್ರಕ್ಕೆ ಮೇರು ಕೊಡುಗೆ ನೀಡಿದ ಗಿರೀಶ್ ಕರ್ನಾಡ್ ಅವರ ಹಯವದನ, ಯಯಾತಿ, ತುಘಲಕ್, ಅಗ್ನಿ ಮತ್ತು ಮಳೆ ನಾಟಕಗಳು ಪ್ರಸಿದ್ಧವಾದವು. ಪ್ರಭುದ್ದ ನಟರಾಗಿದ್ದ ಅವರು ಅನೇಕ ಕನ್ನಡ, ಹಿಂದಿ ಚಿತ್ರಗಳಲ್ಲೂ ನಟಿಸಿದ್ದರು. ’ಸಂಸ್ಕಾರ’, ’ನಾಗಮಂಡಲ’, ’ತಬ್ಬಲಿಯು ನೀನಾದೆ ಮಗನೆ’, ’ಒಂದಾನೊಂದು ಕಾಲದಲ್ಲಿ’, ’ಚೆಲುವಿ’, ’ಕಾನೂರು ಹೆಗ್ಗಡತಿ’ ಮುಂತಾದ ಕನ್ನಡ ಚಿತ್ರಗಳಲ್ಲಿ ನಟಿಸಿದ್ದಾರೆ. ಹಿಂದಿ ಚಿತ್ರಗಳಾದ ’ನಿಶಾಂತ್’, ’ಮಂಥನ್’, ’ಪುಕಾರ್’, ಇತ್ತೀಚಿನ ’ಏಕ್ ಥಾ ಟೈಗರ್’, ’ಟೈಗರ್ ಜಿಂದಾ ಹೈ’ ಮುಂತಾದ ಚಿತ್ರಗಳಲ್ಲಿ ತನ್ನ ಪ್ರಭುದ್ದ ನಟನೆಯಿಂದ ಮನೆಮಾತಾಗಿದ್ದರು.

ಗಿರೀಶ್ ಕರ್ನಾಡರು ತಮ್ಮ ಸಾಹಿತ್ಯ ಕೃಷಿ ಮತ್ತು ಚಲನ ಚಿತ್ರಗಳಿಗಾಗಿ ಪದ್ಮಶ್ರೀ, ಪದ್ಮಭೂಷಣ, ಜ್ಞಾನಪೀಠ ಪ್ರಶಸ್ತಿ, ಸಂಗೀತ ನಾಟಕ ಅಕಾಡಮಿ ಪ್ರಶಸ್ತಿ, ಚಿತ್ರ ನಟನೆ ಮತ್ತು ನರ್ದೇಶನಕ್ಕಾಗಿ ರಾಷ್ಟ್ರ ಪ್ರಶಸ್ತಿ, ಫಿಲಂ ಫೇರ್ ಪ್ರಶಸ್ತಿಗಳಿಂದ ಪುರಸ್ಕೃತರಾಗಿದ್ದರೆ.
ಯಾವುದೇ ಧಾರ್ಮಿಕ ವಿಧಿ ವಿಧಾನಗಳಿಲ್ಲದೆ ಇಂದು ಮಧ್ಯಾಹ್ನದ ನಂತರ ಬೈಯಪ್ಪನಹಳ್ಳಿಯ ವಿದ್ಯುತ್ ಚಿತಾಗಾರದಲ್ಲಿ ಗಿರೀಶ್ ಕರ್ನಾಡ್ ಅವರ ಅಂತ್ಯ ಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳಿಂದ ತಿಳಿದು ಬಂದಿದೆ.

Related posts

Leave a Reply

Your email address will not be published. Required fields are marked *