Header Ads
Header Ads
Breaking News

ಜ.13ರಂದು ಕೆನರಾ ಹೈಸ್ಕೂಲ್ ಮೈದಾನದಲ್ಲಿ ವಿಶಿಷ್ಟರಿಗಾಗಿ ವಿಶಿಷ್ಟ ಮೇಳ-2019

ಆಶಾ ಜ್ಯೋತಿಯ ವತಿಯಿಂದ ವಿಶಿಷ್ಠರಿಗಾಗಿ ವಿಶಿಷ್ಠ ಮೇಳ ಎಂಬ ಕಾರ್ಯಕ್ರಮವನ್ನು ದಿವ್ಯಾಂಗರಿಗಾಗಿಯೇ ಆಯೋಜಿಸುತ್ತಿದೆ. ಜನವರಿ 13ರಂದು ಮಂಗಳೂರಿನ ಕೆನರಾ ಹೈಸ್ಕೂಲ್ ಮೈದಾನದಲ್ಲಿ ವಿವಿಧ ಕಾರ್ಯಕ್ರಮಗಳು ನಡೆಯಲಿದೆ ಎಂದು ಅಧ್ಯಕ್ಷರಾದ ಶ್ರೀನಿವಾಸ ರಾವ್ ಹೇಳಿದರು.

ಅವರು ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದರು. ಸೇವಾಭಾರತಿ ಮಂಗಳೂರು ಕಳೆದ 25 ವರ್ಷಗಳಿಂದ ದಿವ್ಯಾಂಗರ ಜೀವನ ಸುಧಾರಿಸಲು ಶ್ರಮಿಸುತ್ತಿದೆ. ತನ್ನ ಅಂಗ ಸಂಸ್ಥೆಗಳ ಮೂಲಕ ಅವರಿಗೆ ಶಿಕ್ಷಣ, ತರಬೇತಿ ಚಿಕಿತ್ಸೆ ಇತ್ಯಾದಿ ಸೌಕರ್ಯಗಳನ್ನು ಒದಗಿಸಿ ಕೊಟ್ಟು ತನ್ನ ವ್ಯಾಪ್ತಿಯನ್ನು ವಿಸ್ತರಿಸುತ್ತಿದೆ. ಇದೀಗ ಆಶಾಜ್ಯೋತಿಯ ಪ್ರತಿ ವರ್ಷ ವಿಶಿಷ್ಠರಿಗಾಗಿ ವಿಶಿಷ್ಠ ಮೇಳ ಎಂಬ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ ಎಂದರು.

ಆನಂತರ ಮಾಹಿತಿ ನೀಡಿದ ಸೇವಾ ಭಾರತಿ ಅಧ್ಯಕ್ಷರಾದ ಸುಮತಿ ಶೆಣೈ ಅವರು, ವಿಶಿಷ್ಠರಿಗಾಗಿ ವಿಶಿಷ್ಠ ಮೇಳ ಎಂಬ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಹಾಡುವುದು, ಕುಣಿಯುವುದು, ಸ್ಪರ್ಧೆ, ಆಟೋಟಗಳಲ್ಲಿ ಭಾಗವಹಿಸುವುದು, ಕುದುರೆ ಸವಾರಿ ಸಹಿತ ಅನೇಕ ಮೋಜಿನ ಆಟಗಳ ವ್ಯವಸ್ಥೆ ಇರುತ್ತದೆ. ಕೆನರಾ ಹೈಸ್ಕೂಲ್‌ನ ಮೈದಾನದಲ್ಲಿ ಬೆಳಿಗ್ಗೆ 9ಕ್ಕೆ ಮೇಳದ ಉದ್ಘಾಟನೆ ನಡೆಯಲಿದೆ. ಬೆಳಿಗ್ಗೆಯಿಂದ ಸಂಜೆಯ ವರೆಗೆ ವಿವಿಧ ಮನೋರಂಜನಾ ಕಾರ್ಯಕ್ರಮ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಈ ಸಂದರ್ಭ ಸುದ್ದಿಗೋಷ್ಠಿಯಲ್ಲಿ ಕಾರ್ಯದರ್ಶಿಯವರಾದ ಡಾ. ಮುರಳೀಧರ್ ನಾಯ್ಕ್, ಖಜಾಂಜಿ ಕೆ. ವಿಶ್ವನಾಥ್ ಪೈ, ಸಾವಿತ್ರಿ ಎಸ್. ರಾವ್ ಉಪಸ್ಥಿತರಿದ್ದರು.

Related posts

Leave a Reply