Header Ads
Breaking News

ಜ.26ರಂದು ಉಡುಪಿಯ ಪರ್ಕಳದಲ್ಲಿ ಅಷ್ಟ ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆ

ಉಡುಪಿ ಜಿಲ್ಲಾ ಚೆಸ್ ಅಸೋಸಿಯೇಶನ್ ಸಹಯೋಗದಲ್ಲಿ ಅಷ್ಟ ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆ ಇದೇ ತಿಂಗಳ 26ರಂದು ಪರ್ಕಳ ಹೈಸ್ಕೂಲಿನ ಸುವರ್ಣ ಮಹೋತ್ಸವ ಸಭಾ ಭವನದಲ್ಲಿ ನಡೆಯಲಿದೆ. ಈ ಬಗ್ಗೆ ಸುದ್ದಿಗೋಷ್ಟಿಯಲ್ಲಿ ಪರ್ಕಳ ನೇತಾಜಿ ಸ್ಪೋರ್ಟ್ಸ್ ಕ್ಲಬ್‍ನ ಸದಸ್ಯ ಮಂಜುನಾಥ್ ಮಣಿಪಾಲ್ ತಿಳಿಸಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು 44 ವರ್ಷ ಪೂರೈಸಿರುವ ಪರ್ಕಾಳ ನೇತಾಜಿ ಸ್ಪೋರ್ಟ್ಸ್ ಕ್ಲಬ್ ಆಸರೆಯಲ್ಲಿ ಅಷ್ಟ ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆ ಆಯೋಜಿಸಲಾಗಿದ್ದು ಇದರಲ್ಲಿ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕಾಸರಗೋಡು, ಶಿವಮೊಗ್ಗ, ಚಿಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳ ಚದುರಂಗ ಆಟಗಾರರು ಭಾಗವಹಿಸಲಿದ್ದಾರೆ. ಈ ಸ್ಪರ್ಧೆಯು 7,9,11, ಹದಿನೈದು ವಯೋಮಿತಿಯಲ್ಲಿ ಈ ಸ್ಪರ್ಧೆ ನಡೆಯಲಿದ್ದು ಮುಕ್ತ ವಿಭಾಗದಲ್ಲೂ ಹುಡುಗ ಹುಡುಗಿಯರಿಗೆ ಪ್ರತ್ಯೇಕ ವಿಭಾಗದಲ್ಲಿ ಈ ಸ್ಪರ್ಧೆ ನಡೆಯಲಿದೆ ಎಂದರು.

Related posts

Leave a Reply

Your email address will not be published. Required fields are marked *