Header Ads
Breaking News

ಜ.31 ರಿಂದ ಫೆ.9ರವರೆಗೆ ಇಡ್ಯಾ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶಾಭಿಷೇಕ

ಇಡ್ಯಾ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಜನವರಿ 31ರಿಂದ ಫೆಬ್ರವರಿ 9ರವರೆಗೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕ, ಅಷ್ಟಪವಿತ್ರ ನಾಗಮಂಡಲೋತ್ಸವ ಮತ್ತು ಶ್ರೀ ಪಿಲಿ ಚಾಮುಂಡಿ ದೈವದ ಧರ್ಮ ನೇಮೋತ್ಸವ ನಡೆಯಲಿದೆ.

ಇಡ್ಯಾ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಜನವರಿ 31ರಿಂದ ಫೆಬ್ರವರಿ 9ರವರೆಗೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಮತ್ತು ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಮಹಾಬಲ ಪೂಜಾರಿ ಕಡಂಬೋಡಿಯವರು ಸುದ್ದಿಗೋಷ್ಠಿಯಲ್ಲಿ ಮಾಹಿತಿಯನ್ನು ನೀಡಿದ್ದರು. ಸುರತ್ಕಲ್ ವ್ಯಾಪ್ತಿಯ ಅತಿ ಸಣ್ಣ ಕ್ಷೇತ್ರವಾಗಿ ಗುರುತಿಸಿಕೊಂಡಿದ್ದು ಒಂದುವರೆ ಕೋಟಿ ವೆಚ್ಚದಲ್ಲಿ ಜೀರ್ಣೋದ್ದಾರ ಕಾರ್ಯ ನಡೆಯುತ್ತಿದೆ. ಬ್ರಹ್ಮಕಲಶೋತ್ಸವಕ್ಕೆ ಹತ್ತು ದಿನಗಳು ಇದ್ದು ಎಲ್ಲಾ ಕೆಲಸಗಳು ಪೂರ್ಣಗೊಳ್ಳಲಿದೆ. ಫೆ.7ರಂದು ಮೀನ ಲಗ್ನ ಸುಮೂಹೂರ್ತದಲ್ಲಿ ಶ್ರೀ ವಿದ್ಯಾಧರ ಪ್ರತಿಷ್ಠಾಪಿತ ಶ್ರೀ ಮಹಾಲಿಂಗೇಶ್ವರ ದೇವರಿಗೆ ಬ್ರಹ್ಮಶ್ರೀ ಕುಡುಪು ನರಸಿಂಹ ತಂತ್ರಿಗಳ ನೇತೃತ್ವದಲ್ಲಿ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ನಡೆಯಲಿದೆ ಎಂದು ಮಾಹಿತಿಯನ್ನು ನೀಡಿದ್ದರು.

ದೇವಸ್ಥಾನದ ಅನುವಂಶಿಕ ಮೊಕ್ತೇಸರರಾದ ವೇದಮೂರ್ತಿ ಐ.ರಮಾನಂದ ಭಟ್ ಮಾತನಾಡಿ ಇಡ್ಯಾ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶಾಭಿಷೇಕ, ಅಷ್ಟಪವಿತ್ರ ನಾಗಮಂಡಲೋತ್ಸವ ಮತ್ತು ಶ್ರೀ ಪಿಲಿ ಚಾಮುಂಡಿ ದೈವದ ಧಮಧ ನೇಮೋತ್ಸವಗಳು ನಡೆಯಲಿದೆ. ಈ ಸಂದರ್ಬ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಶ್ರೀ ದೇವರ ಆಶೀರ್ವಾದವನ್ನು ಪಡೆಯಬೇಕು. ಮತ್ತು ಜ.31 ರಿಂದ ಫೆ.9 ರವರೆಗೆ ಸಾಕಷ್ಟು ಪೂಜೆಗಳು ನಡೆಯಲಿದೆ ಎಂದು ಹೇಳಿದ್ದರು.

ಈ ಸಂದರ್ಭ ಸುದ್ದಿಗೋಷ್ಠಿಯಲ್ಲಿ ದೇವಸ್ಥಾನದ ಕಾರ್ಯಾಧ್ಯಕ್ಷರಾದ ಸತ್ಯಜೀತ್ ಸುರತ್ಕಲ್, ಅಗರಿ ರಾಘವೇಂದ್ರ ರಾವ್, ಸಂತೋಷ್ ಕುಮಾರ್ ಶೆಟ್ಟಿ, ಪ್ರಧಾನ ಕಾರ್ಯಾಧರ್ಶಿ ಕೃಷ್ಣಕುಮಾರ್, ಪ್ರಧಾನ ಸಂಚಾಲಕ ಅಣ್ಣಪ್ಪ ದೇವಾಡಿಗ, ರಜನಿ ದುಗ್ಗಣ್ಣ ಮೊದಲಾದವರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *