Header Ads
Breaking News

ಡಾ. ಕಾರಂತ ಬಾಲವನ ಪ್ರಶಸ್ತಿ ಪ್ರದಾನ ಸಮಾರಂಭ

ಪುತ್ತೂರು: ಬದುಕಿನಲ್ಲಿ ನಡೆದಾಡಿದ ವಿಶ್ವಕೋಶ ಎಂದೇ ಬಿಂಬಿತರಾಗಿದ್ದ ಡಾ. ಶಿವರಾಮ ಕಾರಂತರು ವಾಸ್ತವವನ್ನು ಆಳವಾಗಿ ಅರಿತುಕೊಂಡವರಾಗಿದ್ದು, ಕಂಡದ್ದನ್ನು ಕಂಡಂತೆ ಹೇಳುವ ಗುಣ ಅವರಲ್ಲಿತ್ತು ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರಿನಿವಾಸ ಪೂಜಾರಿ ಹೇಳಿದರು.

ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ. ಶಿವರಾಮ ಕಾರಂತರ ಬಾಲವನ ಪುತ್ತೂರು, ಸಹಾಯಕ ಆಯುಕ್ತರ ಕಚೇರಿ ಪುತ್ತೂರು ಇವುಗಳ ಸಹಯೋಗದಲ್ಲಿ ಶನಿವಾರ ಪರ್ಲಡ್ಕದಲ್ಲಿರುವ ಡಾ. ಶಿವರಾಮ ಕಾರಂತರ ಬಾಲವನದಲ್ಲಿ ನಡೆದ ಡಾ. ಶಿವರಾಮ ಕಾರಂತರ ಜನ್ಮ ದಿನಾಚರಣೆ ಹಾಗೂ ಡಾ. ಶಿವರಾಮ ಕಾರಂತ ಬಾಲವನ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಅನಾರೋಗ್ಯದ ಹಿನ್ನಲೆಯಲ್ಲಿ ಬಾಲವನ ಪ್ರಶಸ್ತಿ ಪುರಸ್ಕೃತ ಪ್ರೊ. ಡಾ. ಅಮೃತ ಸೋಮೇಶ್ವರ ಅವರು ಪ್ರಶಸ್ತಿ ಸ್ವೀಕರಿಸಲು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಿರಲಿಲ್ಲ. ಅವರ ಸೊಸೆ ರಾಜೇಶ್ವರಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮ ಮುಗಿದ ಬಳಿಕ ಸಚಿವರು, ಶಾಸಕರು, ಸಹಾಯಕ ಕಮೀಷನರ್ ಜೊತೆ ಸೇರಿ ಮಂಗಳೂರಿನ ಕೋಟೆಕಾರ್ ಅಡ್ಕದಲ್ಲಿರುವ ಅಮೃತ ಸೋಮೇಶ್ವರ ಅವರ ಮನೆಗೆ ತೆರಳಿ ಪ್ರಶಸ್ತಿ ಪ್ರಧಾನ ಮಾಡಿದರು.

ಸಮಾರಂಭದಲ್ಲಿ ಶಾಸಕ ಸಂಜೀವ ಮಠಂದೂರು, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ತಾಲೂಕು ಪಂಚಾಯತ್ ಅಧ್ಯಕ್ಷ ಕೆ.ರಾಧಾಕೃಷ್ಣಬೋರ್ಕರ್, ಪುತ್ತೂರು ಸಹಾಯಕ ಕಮೀಷನರ್ ಹಾಗೂ ಬಾಲವನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಡಾ. ಯತೀಶ್ ಉಳ್ಳಾಲ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಸ್ಥಾಯಿ ಸಮಿತಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರಸಭಾ ಸದಸ್ಯೆ ದೀಕ್ಷಾ ಪೈ, ತಹಸೀಲ್ದಾರ್ ರಮೇಶ್ ಬಾಬು, ಬಾಲವನದ ವಿಶೇಷ ಕರ್ತವ್ಯಾಧಿಕಾರಿ ಡಾ. ಸುಂದರ್ ಕೇನಾಜೆ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *