Header Ads
Header Ads
Header Ads
Breaking News

ಡಿ.7ರಂದು ಕಾರ್ಪೋರೇಶನ್ ಬ್ಯಾಂಕ್ ವಿಲೀನ ವಿರೋಧಿಸಿ ಮುಷ್ಕರ

ದ.ಕ. ಜಿಲ್ಲೆಯಲ್ಲೇ ಹುಟ್ಟಿ ಇಲ್ಲಿಯೇ ತನ್ನ ಕೇಂದ್ರ ಕಚೇರಿಯನ್ನು ಹೊಂದಿರುವ ಕಾರ್ಪೊರೇಶನ್ ಬ್ಯಾಂಕ್‌ನ ವಿಲೀನವನ್ನು ವಿರೋಧಿಸಿ ಬ್ಯಾಂಕಿನ ಎಲ್ಲಾ ಕಾರ್ಮಿಕ ಸಂಘಟನೆಗಳು ಜಂಟಿಯಾಗಿ ಡಿ. 7ರಂದು ಧರಣಿ ಮುಷ್ಕರ ಹಮ್ಮಿಕೊಂಡಿವೆ. ಬೆಳಗ್ಗೆ 9ಗಂಟೆಗೆ ಕಾರ್ಪೊರೇಶನ್ ಬ್ಯಾಂಕಿನ ಕೇಂದ್ರ ಕಚೇರಿ ಎದುರು ಧರಣಿ ನಡೆಯಲಿದೆ ಎಂದು ಸುದ್ದಿಗೋಷ್ಠಿಯಲ್ಲಿಂದು ಕಾರ್ಪೊರೇಶನ್ ಬ್ಯಾಂಕ್ ಸಂಘಟನೆಗಳ ಒಕ್ಕೂಟದ ಸಂಚಾಲಕ ವಿನ್ಸೆಂಟ್ ಡಿಸೋಜ ತಿಳಿಸಿದರು.

ಅವರು ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಅವಿಭಜಿತ ದ.ಕ. ಜಿಲ್ಲೆಯಲ್ಲಿ ಐದು ಬ್ಯಾಂಕ್‌ಗಳು ಜನ್ಮ ತಾಳಿದ್ದು, ನಾಲ್ಕು ಬ್ಯಾಂಕುಗಳು ಸಾರ್ವಜನಿಕ ರಂಗದ ಅಗ್ರ ಬ್ಯಾಂಕ್‌ಗಳಾಗಿ ಗುರುತಿಸಿವೆ. ಕೇಂದ್ರ ಸರಕಾರ ಹಿಂದಿನ ವರ್ಷ ವಿಜಯ ಬ್ಯಾಂಕನ್ನು ಬ್ಯಾಂಕ್ ಆಫ್ ಬರೋಡಾದೊಂದಿಗೆ ವಿಲೀನಗೊಳಿಸಿತ್ತು. ಇದೀಗ ಮತ್ತೆ ಕಾರ್ಪೊರೇಶನ್ ಬ್ಯಾಂಕ್ ವಿಲೀನಕ್ಕೆ ಮುಂದಾಗಿದೆ. ರಾಷ್ಟ್ರೀಕೃತ ಬ್ಯಾಂಕ್‌ಗಳ ವಿಲೀನದಿಂದ ಅನೇಕ ಶಾಖೆಗಳು ಮುಚ್ಚಲ್ಪಡುತ್ತವೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಸಹವರ್ತಿ ಬ್ಯಾಂಕುಗಳ ವಿಲೀನ ಪ್ರಕ್ರಿಯೆಯಲ್ಲಿ ದೇಶದ 6950 ಶಾಖೆಗಳನ್ನು ವಿಲೀನಗೊಳಿಸಿದೆ. ಇದರಿಂದ ಗ್ರಾಹಕರು ಸಮಸ್ಯೆ ಅನುಭವಿಸುವಂತಾಗಿದೆ.

ಸುದ್ದಿಗೋಷ್ಠಿಯಲ್ಲಿ ಯೂನಿಯನ್‌ನ ಪದಾಧಿಕಾರಿಗಳಾದ ಸುಧೀಂದ್ರ, ಸತೀಶ್ ಶೆಟ್ಟಿ, ಶ್ರೀನಾಥ ಐತಾಳ್, ಆರ್.ಕೆ. ಬಳ್ಳಾಲ್ ಮೊದಲಾದವರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *