Header Ads
Header Ads
Breaking News

ಡೆಂಗ್ಯೂ, ಮಲೇರಿಯಾ ನಿಯಂತ್ರಣಕ್ಕೆ ವಿಶೇಷ ಯೋಜನೆ ಚಾಲನೆ

ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಮುಂದಾಗಿರುವ ಜಿಲ್ಲಾಡಳಿತವು ಇದೀಗ ಗಪ್ಪಿ ಅಭಿಯಾನದ ಮೂಲಕ ಸೊಳ್ಳೆಗಳ ನಿಯಂತ್ರಣಕ್ಕೆ ಮುಂದಾಗಿದೆ. ಹೌದು, ಡೆಂಗ್ಯೂ ಮಲೇರಿಯಾ ನಿಯಂತ್ರಣಕ್ಕಾಗಿ ದ.ಕ. ಜಿಲ್ಲಾಡಳಿತ, ಮಂಗಳೂರು ಮಹಾನಗರ ಪಾಲಿಕೆ ಮತ್ತು ಆರೋಗ್ಯ ಇಲಾಖೆ ವತಿಯಿಂದ ಮಂಗಳೂರಿನ ಮಹಾತ್ಮಗಾಂಧಿ ಪಾರ್ಕ್‌ನಲ್ಲಿ ಗಪ್ಪಿ ಅಭಿಯಾನವು ನಡೆಯಿತು. ಪಾರ್ಕ್‌ನಲ್ಲಿರುವ ಕೊಳಗಳಿಗೆ ಗಪ್ಪಿ ಮೀನುಗಳನ್ನು ಬಿಡುವ ಮೂಲಕ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಮತ್ತು ಮಂಗಳೂರು ನಗರ ದಕ್ಷಿಣ ಶಾಸಕ ಡಿ. ವೇದವ್ಯಾಸ್ ಕಾಮತ್ ಅವರು ಅಭಿಯಾನಕ್ಕೆ ಚಾಲನೆ ನೀಡಿದರು.

ಈ ಸಂದರ್ಭ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್ ಅವರು, ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಜಿಲ್ಲಾಡಳಿತವು ಕ್ರಮವನ್ನು ಕೈಗೊಂಡಿದೆ. ಎಲ್ಲರ ಸಹಕಾರದಿಂದ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಸಾಧ್ಯ ಎಂದು ಕರೆ ನೀಡಿದರು. ಇದೇ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರು, ಡೆಂಗ್ಯೂ ನಿಯಂತ್ರಣಕ್ಕಾಗಿ ಸಾಕಷ್ಟು ಕ್ರಮಗಳನ್ನು ಜಿಲ್ಲಾಡಳಿತ, ಆರೋಗ್ಯ ಇಲಾಖೆ ನೇತೃತ್ವದಲ್ಲಿ ಕೈಗೊಳ್ಳಲಾಗಿದೆ. ಇದು ಕೇವಲ ಒಂದು ಸೀಸನ್‌ಗೆ ಸೀಮಿತವಾಗಬಾರದು. ಮುಂದಕ್ಕೂ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಗಪ್ಪಿ ಅಭಿಯಾನವನ್ನು ಆರಂಭಿಸಿದ್ದೇವೆ ಎಂದು ಹೇಳಿದರು. ಜಿಲ್ಲಾ ಆರೋಗ್ಯಾಧಿಕಾರಿ ರಾಮಕೃಷ್ಣ ರಾವ್, ಮನಪಾ ಜಂಟಿ ಆಯುಕ್ತೆ ಗಾಯತ್ರಿ ನಾಯಕ್ ಸೇರಿದಂತೆ ವಿವಿಧ ಅಧಿಕಾರಿಗಳು ಈ ಸಂದರ್ಭ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *