Header Ads
Breaking News

ತಲಪಾಡಿ ನಾಗರಿಕ ಹಿತರಕ್ಷಣಾ ವೇದಿಕೆಯಿಂದ ಅರ್ಹ ಫಲಾನುಭವಿಗಳಿಗೆ ಹೊಲಿಗೆ ಯಂತ್ರ ವಿತರಣೆ

ನಾಗರಿಕ ಹಿತರಕ್ಷಣಾ ವೇದಿಕೆ ತಲಪಾಡಿ ಇದರ ಆಶ್ರಯದಲ್ಲಿ ಅರ್ಹ ಫಲಾನುಭವಿಗಳಿಗೆ ಹೊಲಿಗೆ ಯಂತ್ರ ವಿತರಣೆ, ಇಬ್ಬರು ದೇಹ ದಾರ್ಡ್ಯರಿಗೆ ಸನ್ಮಾನ, ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ತಲಪಾಡಿಯಲ್ಲಿ ನಡೆಯಿತು.ತಾ.ಪಂ.ಅಧ್ಯಕ್ಷ ಮುಹಮ್ಮದ್ ಮೋನು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಅವರು ಕೊರೊನ ಸೋಂಕು ಹರಡಿದ ಬಳಿಕ ಬಹಳಷ್ಟು ಜನರಿಗೆ ಉದ್ಯೋಗ ಇಲ್ಲದಂತಾಗಿದೆ.ಇಂತಹ ಸಂದರ್ಭದಲ್ಲಿ ಹೊಲಿಗೆ ಯಂತ್ರ ವನ್ನು ವಿತರಣೆ ಮಾಡಿರುವುದು ಶ್ಲಾಘನೀಯ.ಇಂತಹ ಸಮಾಜ ಸೇವೆಯಿಂದ ಬದುಕಲು ಸಾಧ್ಯ ಎಂದರು.

ಈ ಸಂದರ್ಭದಲ್ಲಿ ಅರ್ಹ ಫಲಾನುಭವಿಗಳಿಗೆ ಹೊಲಿಗೆ ಯಂತ್ರ ವಿತರಣೆ ಮಾಡಲಾಯಿತು.ಇಬ್ಬರು ದೇಹ ದಾರ್ಡ್ಯ ಪಟುಗಳನ್ನು ಸನ್ಮಾನಿಸಲಾಯಿತು.ಎಸ್ಸೆಸೆಲ್ಸಿಯಲ್ಲಿ ಅತ್ಯಧಿಕ ಅಂಕ ಪಡೆದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು.ಈ ಸಂದರ್ಭ ಕಾರ್ಯಕ್ರಮದಲ್ಲಿ ತಾ.ಪಂ.ಸದಸ್ಯ ಸಿದ್ದೀಕ್ ತಲಪಾಡಿ,ಸುರೇಖಾ ಚಂದ್ರ ಹಾಸ್ ,ಖಾದರ್ ತಲಪಾಡಿ ಶರ್ಮಿಳಾ ಟೀಚರ್,ಸತ್ತಾರ್, ಅಶ್ರಫ್ ಕೆಸಿರೋಡ್, ಗಣೇಶ ಶೆಟ್ಟಿ, ಕೃಷ್ಣಪ್ಪ ಸಾಲ್ಯಾನ್, ಅರುಣ್ ರಾಜ್, ಇಬ್ರಾಹಿಂ, ಮೊಯ್ದಿನ್ ಬಾವಾ,ಮೌಸೀರ್ ಅಹ್ಮದ್ ಸಾಮಣಿಗೆ, ಬಿಎಸ್ ಇಸ್ಮಾಯಿಲ್ ಮೊದಲಾದವರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *