Header Ads
Header Ads
Breaking News

ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ವಿಟ್ಲ ಪದವಿ ಪೂರ್ವ ಕಾಲೇಜಿನಲ್ಲಿ ಪಂದ್ಯಾಟ

 

ವಿಟ್ಲ: ದ.ಕ ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಂಟ್ವಾಳ, ವಿಟ್ಲದ ವಿಠಲ ವಿದ್ಯಾ ಸಂಘದ ವಿಠಲ ಪ್ರೌಢ ಶಾಲಾ ವತಿಯಿಂದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿಗಳ ಬಂಟ್ವಾಳ ತಾಲ್ಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ ವಿಠಲ ಪದವಿ ಪೂರ್ವ ಕಾಲೇಜಿನ ಇಂಡೋರ್ ಕ್ರೀಡಾಂಗಣದಲ್ಲಿ ನಡೆಯಿತು.

ಪಂದ್ಯಾಟವನ್ನು ವಿಟ್ಲ ಪಟ್ಟಣ ಪಂಚಾಯಿತಿ ಅಧ್ಯಕ್ಷ ಅರುಣ ಎಂ ವಿಟ್ಲ ಉದ್ಘಾಟಿಸಿ ಮಾತನಾಡಿ ಪ್ರತಿಯೊಬ್ಬ ಕ್ರೀಡಾಪಟು ಕ್ರೀಡಾಸ್ಪೂರ್ತಿಯಿಂದ ಆಡಬೇಕು. ಸೋಲು-ಗೆಲುವು ಪ್ರತಿಯೊಂದು ಪಂದ್ಯಾಟದಲ್ಲಿರುವುದು ಸಹಜ. ಬಹುಮಾನವೇ ಪ್ರಾಮುಖ್ಯತೆಯಲ್ಲ. ಕ್ರೀಡಾಸ್ಪೂರ್ತಿ ಮುಖ್ಯವಾಗಿದೆ ಎಂದು ತಿಳಿಸಿದರು. ಬಂಟ್ವಾಳ ತಾಲ್ಲೂಕಿನ ವಿವಿಧ ಶಾಲೆಗಳಿಂದ ೪೨ ತಂಡಗಳು ಭಾಗವಹಿಸಿದ್ದು, ಒಟ್ಟು ೧೬೦ ಕ್ರೀಡಾಪಟುಗಳು ಪಂದ್ಯಾಟದಲ್ಲಿ ಪಾಲ್ಗೊಂಡಿದ್ದಾರೆ.
ಈ ಸಂದರ್ಭ ವಿಟ್ಲ ಪಟ್ಟಣ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ರವಿಪ್ರಕಾಶ್, ವಿಠಲ ವಿದ್ಯಾ ಸಂಘದ ಉಪಾಧ್ಯಕ್ಷ ಕ.ಶಿ ವಿಶ್ವನಾಥ, ಕೋಶಾಧಿಕಾರಿ ಎಂ ನಿತ್ಯಾನಂದ ನಾಯಕ್, ಪಟ್ಟಣ ಪಂಚಾಯಿತಿ ಸದಸ್ಯ ಜಯಂತ, ವಿಟ್ಲ ರೋಟರಿ ಕ್ಲಬ್ ಅಧ್ಯಕ್ಷ ಸಂಜೀವ ಪೂಜಾರಿ, ಉದ್ಯಮಿಗಳಾದ ಮಹಮ್ಮದ್ ಅಶ್ರಫ್ ಚಂದಳಿಕೆ, ಮನ್ಸೂರ್ ಕಂಬಳಬೆಟ್ಟು, ವಿಠಲ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಅಣ್ಣಪ್ಪ ಸಾಸ್ತಾನ, ಸುಪ್ರಜಿತ್ ಐಟಿಐನ ಪ್ರಾಂಶುಪಾಲ ರಘುರಾಮ ಶಾಸ್ತ್ರಿ, ದೈಹಿಕ ಶಿಕ್ಷಣ ಇಲಾಖೆಯ ಪರಿವೀಕ್ಷಕಿ ರತ್ನಾವತಿ, ಬಂಟ್ವಾಳ ದೈಹಿಕ ಶಿಕ್ಷಕ ಸಂಘದ ಅಧ್ಯಕ್ಷ ಜಗದೀಶ್, ದೈಹಿಕ ಶಿಕ್ಷಕ ಸಂಘದ ಗೌರವ ಸಲಹೆಗಾರ ಗಂಗಾಧರ್ ಮಾಣಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ಜಯರಾಮ್, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಪ್ರದೀಫ್, ರವಿಪ್ರಸಾದ್, ಯಶವಂತ ವಿಟ್ಲ, ಪ್ರೌಢ ಶಾಲಾ ಮುಖ್ಯ ಶಿಕ್ಷಕ ಕಿರಣ್ ಕುಮಾರ್ ಬ್ರಹ್ಮಾವರ, ಶಿಕ್ಷಕ ಶಂಕರ್‌ನಾರಾಯಣ ಪ್ರಸಾದ್, ದೈಹಿಕ ಶಿಕ್ಷಕಿ ಮಲ್ಲಿಕಾ ಹೆಗ್ದೆ ಮೊದಲಾದವರು ಉಪಸ್ಥಿತರಿದ್ದರು.
ವರದಿ: ಮಹಮ್ಮದ್ ಆಲಿ ವಿಟ್ಲ

Related posts

Leave a Reply