Header Ads
Breaking News

ತುಳುಭಾಷೆಯನ್ನು 8ನೇ ಪರಿಚ್ಚೇದಕ್ಕೆ ಸೇರಿಸುವ ಪ್ರಯತ್ನ : ಹಕ್ಕೊತ್ತಾಯ ಮಂಡಿಸಲು ಮುಂದಾದ ಕರಾವಳಿಯ ಶಾಸಕರು

ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾಗಿರುವ ತುಳುಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರಿಸುವ ಪ್ರಯತ್ನಕ್ಕೆ ಪೂರಕವಾಗಿ ತುಳು ಭಾಷೆಯನ್ನು ರಾಜ್ಯದ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡಬೇಕು ಎನ್ನುವ ತುಳುನಾಡಿನ ಬಹು ವರ್ಷಗಳ ಕೂಗು ಇದೀಗ ಸಾಕಾರಗೊಳ್ಳುವ ಹಂತ ತಲುಪಿದೆ.

ಬೆಂಗಳೂರಿನಲ್ಲಿ ಈಗ ನಡೆಯುತ್ತಿರುವ ವಿಧಾನ ಮಂಡಲ ಅಧಿವೇಶನದಲ್ಲೇ ತುಳುವನ್ನು ರಾಜ್ಯ ಭಾಷೆಯಾಗಿ ಘೋಷಯಾಗಿಸುವ ನಿಟ್ಟಿನಲ್ಲಿ ಕರಾವಳಿ ಶಾಸಕರು ಹಕ್ಕೊತ್ತಾಯ ಮಂಡಿಸುವುದಕ್ಕೆ ಮುಂದಾಗಿದ್ದಾರೆ. ಒಂದುವೇಳೆ ರಾಜ್ಯ ಸರಕಾರ ತುಳು ಭಾಷೆಯನ್ನು ರಾಜ್ಯ ಅಧಿಕೃತ ಭಾಷೆಯಾಗಿ ಘೋಷಣೆ ಮಾಡಿದರೆ, ತುಳುವನ್ನು 8ನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸುವ ಹೋರಾಟ ಪ್ರಯತ್ನಕ್ಕೆ ಪುಷ್ಟಿಸಿಗಲಿದೆ. ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ಸಿ.ಟಿ. ರವಿ ಅವರು ಇತ್ತೀಚೆಗಷ್ಟೇ ತುಳು ಭಾಷೆಯ ಪರ ಟ್ವೀಟ್ ಮಾಡಿದ್ದು, ತುಳುನಾಡಿಗರ ಮನವಿಗೆ ಸ್ಪಂದಿಸಿ, ತುಳು ಭಾಷೆಯನ್ನು ರಾಜ್ಯದ ಭಾಷೆಯಾಗಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳನ್ನು ಮನವಿ ಮಾಡುತ್ತೇನೆ ಎಂದಿದ್ದರು. ಅಲ್ಲದೆ, ಕರಾವಳಿಯ ಭಾಗದ ಎಲ್ಲ ಶಾಸಕರು ಇದೀಗ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ, ಈ ಬಗ್ಗೆ ಮನವಿ ಮಾಡಿದ್ದಾರೆ. ಮುಖ್ಯಮಂತ್ರಿಗಳು ಕೂಡ ಮನವಿಗೆ ಸಕಾರತ್ಮಕವಾಗಿ ಸ್ಪಂದಿಸಿದ್ದಾರೆ ಎನ್ನಲಾಗುತ್ತಿದೆ.

Related posts

Leave a Reply

Your email address will not be published. Required fields are marked *