Header Ads
Breaking News

ತೊಕ್ಕೊಟ್ಟು ಜಂಕ್ಷನ್‌ನಲ್ಲಿ ಮೋಟಾರು ವಾಹನ ಕಾಯ್ದೆಯ ತಿದ್ದುಪಡಿ ಖಂಡಿಸಿ ಪ್ರತಿಭಟನೆ

ಸೋಶಿಯಲ್ ಡೆಮಾಕ್ರಾಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ವಿಧಾನಸಭಾ ಕ್ಷೇತ್ರ ವತಿಯಿಂದ ಮೋಟಾರು ವಾಹನ ಕಾಯ್ದೆಯ ತಿದ್ದುಪಡಿ ಮತ್ತು ರಾಷ್ಟ್ರೀಯ ಹೆದ್ದಾರಿಯ ದುರಾವಸ್ಥೆಗಳನ್ನು ಖಂಡಿಸಿ ಕೇಂದ್ರ ಸರಕಾರದ ಜನವಿರೋಧಿ ನೀತಿ ಹಾಗೂ ರಾಜ್ಯ ಸರಕಾರದ ನಿಷ್ಕ್ರಿಯತೆ ಯ ವಿರುದ್ಧ ತೊಕ್ಕೊಟ್ಟು ಜಂಕ್ಷನ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಎಸ್ ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ ಪ್ರತಿಭಟನೆಯನ್ನು ಉದೇಶಿಸಿ ಮಾತನಾಡಿ ದೇಶದಲ್ಲಿ ಫ್ಯಾಸಿಸಂ ಮನೋಭಾವದ ಪ್ರಧಾನಿ ಮೋದಿ ಆಡಳಿತಕ್ಕೆ ಬರಲು, ಕಾಂಗ್ರೆಸ್ ಪಕ್ಷದ ಮೃದು ಹಿಂದುತ್ವದ ಧೋರಣೆಯೇ ಕಾರಣ ಅಂತ ಹೇಳಿದ್ರು. ಈ ಸಂದರ್ಭ ಇಸ್ಮಾಯಿಲ್ ತಲಪಾಡಿ, ಇಸ್ಮಾಯಿಲ್ ಶಾಫಿ ಬಬ್ಬುಕಟ್ಟೆ, ಮಂಗಳೂರು ಕ್ಷೇತ್ರ ಅಧ್ಯಕ್ಷ ಅಬ್ಬಾಸ್ ಕಿನ್ಯಾ, ಎಸ್ ಡಿಪಿಐ ನಗರಸಭೆ ವಲಯ ಅಧ್ಯಕ್ಷ ಎ.ಆರ್ ಅಬ್ಬಾಸ್, ಅಬ್ದುಲ್ ಲತೀಫ್ ಕೋಡಿಜಾಲ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *