Header Ads
Breaking News

ತ್ರೀವೇಣಿ ಜ್ಞಾನವಿಕಾಸ ಕೇಂದ್ರದ ಪ್ರಥಮ ವಾರ್ಷಿಕೋತ್ಸವ- ವಿಟ್ಲದ ಚಂದಳಿಕೆ ಭಾರತ ಆಡಿಟೋರಿಯಂನಲ್ಲಿ ಕಾರ್ಯಕ್ರಮ

ವಿಟ್ಲ: ವಿಟ್ಲ ವಲಯ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ತ್ರೀವೇಣಿ ಜ್ಞಾನವಿಕಾಸ ಕೇಂದ್ರದ ಪ್ರಥಮ ವಾರ್ಷಿಕೋತ್ಸವ ಕಾರ್ಯಕ್ರಮ ವಿಟ್ಲದ ಚಂದಳಿಕೆ ಭಾರತ ಆಡಿಟೋರಿಯಂನಲ್ಲಿ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ದ.ಕ ಜಿಲ್ಲಾ ನಿರ್ದೇಶಕ ಪ್ರವೀಣ್ ಕುಮಾರ್ ಮಾತನಾಡಿ ವಿಟ್ಲ ಭಾಗದಲ್ಲಿ ಕಳೆದ 15 ವರ್ಷದಲ್ಲಿ ಸಮಾಜದ ಕಟ್ಟಕಡೆಯ ವ್ಯಕ್ತಿಗಳಿಗೆ ಆರ್ಥಿಕ ಬಲ ತುಂಬುವ ಕಾರ್ಯ ಮಾಡುತ್ತಿದೆ. ಜ್ಞಾನ ವಿಕಾಸ ಯೋಜನೆ ಪ್ರತಿಯೊಬ್ಬರಿಗೂ ಜೀವನದ ಪಾಠ ದೊರೆಯುತ್ತದೆ. ಸಮಾಜದಲ್ಲಿ ಉತ್ತಮ ಜೀವನ ಸಾಗಿಸಲು ಪ್ರೇರಣೆಯಾಗುತ್ತದೆ ಎಂದು ಹೇಳಿದರು.

ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ದ.ಕ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಶೈಲಜಾ ಭಟ್ ಮಾತನಾಡಿ ಮಹಿಳೆಯರು ಆರ್ಥಿಕ, ಸಾಮಾಜಿಕ, ಶೈಕ್ಷಣಿಕವಾಗಿ ಸಬಲರಾಗಬೇಕು. ಜ್ಞಾನ ವಿಕಾಸ ಯೋಜನೆಗಳು ಮಹಿಳೆಯರ ಅಭ್ಯುದಯಕ್ಕೆ ಶ್ರಮಿಸುತ್ತಿದೆ. ಮಹಿಳೆಯರು ಸಬಲರಾದಾಗ ಸಮಾಜ ಅಭಿವೃದ್ಧಿ ಹೊಂದುತ್ತದೆ ಎಂದರು.

ವಿಟ್ಲ ವಲಯ ಪ್ರಗತಿಬಂಧು ಸ್ವಸಹಾಯ ಸಂಘಗಳ ವಲಯಾಧ್ಯಕ್ಷ ಜನಾರ್ಧನ ಪದ್ಮಶಾಲಿ ಅಧ್ಯಕ್ಷತೆ ವಹಿಸಿದ್ದರು. ಭಾರತ ಆಡಿಟೋರಿಯಂ ಮಾಲಕ ಸಂಜೀವ ಪೂಜಾರಿ ಅವರನ್ನು ಸನ್ಮಾನಿಸಲಾಯಿತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಜ್ಞಾನ ವಿಕಾಸ ಯೋಜನೆಯ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಬಂಟ್ವಾಳ ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ, ವಿಟ್ಲ ವಲಯ ಜನಜಾಗೃತಿ ವೇದಿಕೆಯ ವಲಯಾಧ್ಯಕ್ಷ ಕೃಷ್ಣಯ್ಯ ಬಲ್ಲಾಳ್, ಯೋಜನಾಧಿಕಾರಿ ಚೆನ್ನಪ್ಪ ಗೌಡ, , ಸಮನ್ವಯ ಅಧಿಕಾರಿ ನಳಿನಾಕ್ಷಿ, ಮೇಲ್ವಿಚಾರಕ ರಮೇಶ್, ಉಷಾ, ನೂರ್ಝಾಹನ್, ರೇಣುಕಾ, ಉಮಾ ಉಪಸ್ಥಿತರಿದ್ದರು.

 

Related posts

Leave a Reply

Your email address will not be published. Required fields are marked *