Header Ads
Breaking News

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಡಿಮೆಯಾದ ಮಳೆ : ಶಾಲಾ ಕಾಲೇಜುಗಳು ಮತ್ತೆ ಪುನರಾರಂಭ

ಕರಾವಳಿಯ ಉಭಯ ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಪ್ರಮಾಣದಲ್ಲಿ ಸುರಿದು ಭಾರೀ ಆವಾಂತರ ಸೃಷ್ಟಿಸಿದ್ದ ಮಳೆ ಸದ್ಯಕ್ಕೆ ಶಾಂತವಾಗಿದೆ. ದ.ಕ. ಜಿಲ್ಲೆಯಲ್ಲಿ ಇಂದು ಕೂಡ ಮಳೆಬರುವ ಸಾಧ್ಯತೆ ಇದೆ ಎನ್ನುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯಲ್ಲಿ ಇಂದು ಆರೆಂಜ್ ಅಲರ್ಟ್‌ನ್ನು ಘೋಷಿಸಲಾಗಿದೆ. ದ.ಕ. ಜಿಲ್ಲೆಯ ಹಲವೆಡೆ ನಿನ್ನೆ ಅಲ್ಪಪ್ರಮಾಣದಲ್ಲಿ ಮಳೆ ಸುರಿದಿದೆ. ಆದರೆ ರಾತ್ರಿಯಿಂದ ಬೆಳಗ್ಗಿನವರೆಗೆ ಭಾರೀ ಪ್ರಮಾಣದಲ್ಲಿ ಮಳೆ ಸುರಿದಿದೆ. ಕರಾವಳಿಯಲ್ಲಿ ಮಳೆಯಿಂದಾದ ಅವಘಡಗಳು ಒಂದೆರಡಲ್ಲ. ಸಾಕಷ್ಟು ಅವಘಡಗಳು ಸಂಭವಿಸಿದ್ದು ಜನ ಸಂಕಷ್ಟ ಪಡುವಂತಾಗಿದೆ. ಇನ್ನು ಮಳೆ ಹೆಚ್ಚಾದ್ರೆ ಇನ್ನಷ್ಟು ಅನಾಹುತಗಳು ಸಂಭವಿಸೋದು ಮಾತ್ರ ಪಕ್ಕಾ. ಮಳೆ ಹಿನ್ನೆಲೆ ಕಳೆದ ವಾರ ಐದು ದಿನಗಳ ಕಾಲ ದ.ಕ. ಮತ್ತು ಉಡುಪಿ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ಆದ್ರೆ ಇಂದಿನಿಂದ ಶಾಲಾ ಕಾಲೇಜುಗಳು ಮತ್ತೆ ಆರಂಭವಾಗಿದೆ. ಒಟ್ಟಾರೆಯಾಗಿ ಈ ಬಾರಿಯ ಮಳೆ ಹಲವು ಅನಾಹುತಗಳನ್ನು ಹೊತ್ತು ತಂದಿದ್ದು ಜನ ಸಂಕಷ್ಟ ಪಡುವಂತಾಗಿದೆ.

Related posts

Leave a Reply

Your email address will not be published. Required fields are marked *