Header Ads
Header Ads
Header Ads
Header Ads
Header Ads
Header Ads
Breaking News

ದಕ್ಷಿಣ ಬ್ಲಾಕ್ ಕಾಂಗ್ರೆಸ್, ನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಡೆಂಗ್ಯೂ ನಿಯಂತ್ರಣ ಜಾಗೃತಿ ಅಭಿಯಾನ

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್, ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಆಶ್ರಯದಲ್ಲಿ ಡೆಂಗ್ಯೂ ನಿಯಂತ್ರಣ ಜಾಗೃತಿ ಅಭಿಯಾನವು ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.

ಅಭಿಯಾನಲ್ಲಿ ಮಾಜಿ ಶಾಸಕ ಜೆ.ಆರ್. ಲೋಬೊ ಅವರು ಮಾತನಾಡಿ, ಡೆಂಗ್ಯೂ ನಿಯಂತ್ರಣಕ್ಕೆ ಜಿಲ್ಲಾಡಳಿತ ಮತ್ತು ಮಹಾನಗರ ಪಾಲಿಕೆ ಈಗಾಗಲೇ ಸೂಕ್ತ ಕ್ರಮಗಳನ್ನು ಕೈಗೊಂಡಿದೆ. ಜನತೆಗೆ ಅರಿವು ಮೂಡಿಸುವ ಕಾರ್ಯಕ್ರಮ ಅಗತ್ಯವಿದೆ. ಬೂತ್ ಗಳ ಮುಖಾಂತರ ನಮ್ಮ ಪರಿಸರದಲ್ಲಿ ಕಾರ್ಯಕರ್ತರು ತಂಡವನ್ನು ರಚಿಸಿ ಸ್ವಯಂ ಸೇವಕರಾಗಿ ಕೆಲಸ ಮಾಡಿದರೆ ಪರಿಣಾಮಕಾರಿಯಾಗಿ ನಿಯಂತ್ರಣ ಮಾಡಬಹುದು ಎಂದು ಹೇಳಿದರು.

ಆನಂತರ ನಿವೃತ್ತ ಆರೋಗ್ಯಾಧಿಕಾರಿ ಜಯರಾಮ್ ಅವರು ಡೆಂಗ್ಯೂ ನಿಯಂತ್ರಣ ಮತ್ತು ಚಿಕಿತ್ಸೆಯ ಬಗ್ಗೆ ಮಾಹಿತಿ ನೀಡಿದರು.
ಈ ಸಂದರ್ಭ ಕಾಂಗ್ರೆಸ್ ಕಾರ್ಯಕರ್ತರಾದ ಪಿ.ವಿ ಮೋಹನ್, ಟಿ.ಕೆ. ಸುಧೀರ್, ಸುರೇಶ್ ಶೆಟ್ಟಿ, ಪ್ರಭಾಕರ್ ಶ್ರೀಯಾನ್ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *