

ದ್ವಿಚಕ್ರ ವಾಹನಗಳೆರಡರ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚೆಂಬುಗುಡ್ಡೆ ಬಳಿ ಇಂದು ನಸುಕಿನ ಜಾವ ಸಂಭವಿಸಿದೆ.ಸಂತೋಷನಗರ ನಿವಾಸಿ ಸಂದೇಶ್ ಕೆರೆಬೈಲ್ (38) ಸಾವನ್ನಪ್ಪಿದವರು. ಕೊಲ್ಯ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿ ಮನೆಗೆ ವಾಪಸ್ಸಾಗುವ ಸಂದರ್ಭ ನಸುಕು 3 ರ ಜಾವಕ್ಕೆ ಅಪಘಾತ ಸಂಭವಿಸಿದೆ. ತಲೆಗೆ ಗಂಭೀರ ಗಾಯಗೊಂಡ ಸಂದೇಶ್, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪೈಂಟರ್ ಆಗಿ ದುಡಿಯುತ್ತಿದ್ದ ಸಂದೇಶ್, ಕೊರೊನಾ ಲಾಕ್ ಡೌನ್ ನಂತರ ಕೊಲ್ಯ ಸಮೀಪ ಮೀನು ಮಾರಾಟ ನಡೆಸುತ್ತಿದ್ದರು. ಮಂಗಳೂರಿನ ನಾಗುರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.