Header Ads
Header Ads
Breaking News

ದ.ಕ ಜಿಲ್ಲಾ ರೈತ ಸಂಘ ಹಸಿರು ಸೇನೆಯ ವತಿಯಿಂದ ಗ್ರಾಮ ದರ್ಶನ ಕಾರ್ಯಕ್ರಮ

ದ.ಕ ಜಿಲ್ಲಾ ರೈತ ಸಂಘ ಹಸಿರು ಸೇನೆಯ ವತಿಯಿಂದ ಮಂಗಳೂರಿನ ಕೆನರಾ ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದ ವಿದ್ಯಾರ್ಥಿಗಳಿಗೆ ಗ್ರಾಮ ದರ್ಶನ ಕಾರ್ಯಕ್ರಮ ಬಂಟ್ವಾಳ ತಾಲೂಕಿನ ಕುಪ್ಪೆ ಪದವಿನಲ್ಲಿ ನಡೆಯಿತು. ಗ್ರಾಮೀಣ ಜೀವನದ ಬಗ್ಗೆ, ಅವರ ಕೃಷಿ ಚಟುವಟಿಕೆಗಳ ಬಗ್ಗೆ ಅಧ್ಯಯನ ನಡೆಸುವ ಉದ್ದೇಶದಿಂದ ಕೆನರಾ ಕಾಲೇಜಿನ ವಾಣಿಜ್ಯ ಶಾಸ್ತ್ರ ವಿದ್ಯಾರ್ಥಿಗಳು, ಉಪನ್ಯಾಸಕರ ಮಾರ್ಗದರ್ಶನದಲ್ಲಿ ಈ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ರೈತ ಸಂಘ ಹಸಿರು ಸೇನೆಯ ಜಿಲ್ಲಾಧ್ಯಕ್ಷ ಶ್ರೀಧರ ಶೆಟ್ಟಿ ಬೈಲುಗುತ್ತು ವಿದ್ಯಾರ್ಥಿಗಳ ಗ್ರಾಮದರ್ಶನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಸರಕಾರ ರೈತನನ್ನು ಕಡೆಗಣಿಸಿದೆ. ರೈತ ಮಲಗಿದರೆ ದೇಶ ನಾಶವಾಗುತ್ತದೆ ಎಂದರು ಎಂದರು. ಎಡಪದವು ವ್ಯವಸಾಯ ಸಹಕಾರಿ ಬ್ಯಾಂಕಿನ ಅಧ್ಯಕ್ಷ ನೀಲಯ್ಯ ಎಂ. ಅಗರಿ ಅಧ್ಯಕ್ಷತೆ ವಹಿಸಿದ್ದರು. ಪ್ರಗತಿಪರ ಕೃಷಿಕ ದಯಾನಂದ ಶೆಟ್ಟಿ ಪ್ರಾಸ್ತವಿಕವಾಗಿ ಮಾತನಾಡಿದರು. ಕೃಷಿಕರಾದ ಶರತ್ ಕುಮಾರ್ ಶೆಟ್ಟಿ, ರೈತ ಸಂಘದ ಸಂಘಟನಾ ಕಾರ್ಯದರ್ಶಿ ಮನೋಹರ ಶೆಟ್ಟಿ, ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *