
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಕಟ್ಟಡದ 2ನೇ ಮಹಡಿಯಲ್ಲಿ ಸಂಸದರ ಕಚೇರಿ ನವೀಕೃತವಾಗಿ ಕಾರ್ಯಾರಂಭಿಸಲಿದ್ದು, ಇದರ ಉದ್ಘಾಟನಾ ಕಾರ್ಯಕ್ರಮ ನಡೆಯಿತು.ಬಿಜೆಪಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು.
ಇದೇ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಮಾತನಾಡಿ, ದಕ್ಷಿಣ ಕನ್ನಡ ಲೋಕಸಭಾ ಸದಸ್ಯರ ಕಾರ್ಯಾಲಯ ಕಳೆದ 10 ವರ್ಷದಿಂದ ಇಲ್ಲೇ ಕಾರ್ಯ ನಿರ್ವಹಿಸುತ್ತಿತ್ತು. ಇದೀಗ ನವೀಕೃತ ಕಾರ್ಯಲಯ ನಿರ್ಮಿಸಿದ್ದು ಇದರ ಉದ್ಘಾಟನೆಯನ್ನು ಬಿ.ಎಲ್ ಸಂತೋಷ್ ಅವರು ನೆರವೇರಿದ್ರು. ಪೇಪರ್ ಲೆಸ್ ಕಾರ್ಯಾಲಯವಾಗಿ ಪರಿವರ್ತನೆಗೊಳ್ಳುತ್ತಿದೆ. ಇವತ್ತಿನಿಂದ ಬರುವ ಮನವಿಗಳನ್ನು ಆ ಇಲಾಖೆಗೆ ತಕ್ಷಣ ಕಂಪ್ಯೂಟರ್ ಮುಖಾಂತರವೇ ಕೇಂದ್ರ, ರಾಜ್ಯ ಸರ್ಕಾರದ ಇಲಾಖೆಗಳಿಗೆ ತಲುಪಿಸುವಂತ ಕೆಲಸ ಮಾಡಲಾಗುವುದು ಎಂದು ಹೇಳಿದರು.
ಈ ಸಂದರ್ಭ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ಜಿಲ್ಲಾಧ್ಯಕ್ಷರಾದ ಸಂಜೀವ ಮಠಂದೂರು, ಶಾಸಕರಾದ ಡಿ. ವೇದವ್ಯಾಸ ಕಾಮತ್, ಡಾ. ವೈ ಭರತ್ ಶೆಟ್ಟಿ, ಉಮಾನಾಥ್ ಕೋಟ್ಯಾನ, ಎಸ್. ಅಂಗಾರ, ವಿ. ಸುನೀಲ್ ಕುಮಾರ್ ಮತ್ತು ಬಿಜೆಪಿಯ ಕಾರ್ಯಕರ್ತರು ಉಪಸ್ಥಿತರಿದ್ದರು.