Header Ads
Breaking News

ದ.ಕ. ಜಿಲ್ಲೆಯಲ್ಲಿ ಏರುತ್ತಿರುವ ಕೊರೊನಾ ಸಾವಿನ ಸಂಖ್ಯೆ : ಒಂದೇ ದಿನ ಜಿಲ್ಲೆಯಲ್ಲಿ ಮೂವರು ಬಲಿ

ದ.ಕ. ಜಿಲ್ಲೆಯಲ್ಲಿ ಕೊರೊನಾ ಸಾವಿನ ಸಂಖ್ಯೆ ಏರುತ್ತಲೇ ಇದ್ದು, ಬುಧವಾರ ಮತ್ತೆ ಮೂವರು ಈ ಮಹಾಮಾರಿಗೆ ಬಲಿಯಾಗಿದ್ದಾರೆ. ಉಳ್ಳಾಲ ಮೂಲದ 62 ವರ್ಷದ ವೃದ್ಧೆ, ಪುತ್ತೂರು ಮೂಲದ 32 ವರ್ಷದ ಮಹಿಳೆ ಹಾಗೂ ಭಟ್ಕಳ ಮೂಲದ 60 ವರ್ಷದ ವ್ಯಕ್ತಿಯೊಬ್ಬರು ಇಂದು ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.ಕೊರೋನ ಪಾಸಿಟಿವ್ ಆಗಿದ್ದ ಈ ಮೂವರೂ ವಿವಿಧ ಖಾಯಿಲೆಗಳಿಂದ ಬಳಲುತ್ತಿದ್ದರೆನ್ನಲಾಗಿದೆ.ಈ ಪೈಕಿ ಇಬ್ಬರು ಮಹಿಳೆಯರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಭಟ್ಕಳ ಮೂಲದ 60 ವರ್ಷದ ವ್ಯಕ್ತಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮೂವರಿಗೂ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.ಈ ಮೂರು ಸಾವಿನೊಂದಿಗೆ ದ.ಕ. ಜಿಲ್ಲೆಯಲ್ಲಿ ಕೊರೊನಾ ವೈರಸ್ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 29ಕ್ಕೇರಿಕೆಯಾಗಿದೆ.

Related posts

Leave a Reply

Your email address will not be published. Required fields are marked *