Header Ads
Breaking News

ದ.ಕ. ಜಿಲ್ಲೆಯಲ್ಲಿ ಮೇ 4ರಿಂದ ರಿಲೀಫ್-ಅಂಗಡಿ ಮುಗ್ಗಟ್ಟುಗಳನ್ನು ತೆರೆಯಲು ಅವಕಾಶ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ ಬೆಳಗ್ಗೆ 7 ರಿಂದ 7 ರ ತನಕ ರಿಲೀಫ್ ನೀಡಲಾಗಿದ್ದು ಅಂಗಡಿ ಮುಗ್ಗಟ್ಟುಗಳನ್ನು ತೆರೆಯಲು ಅವಕಾಶ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಕೋಟ ಶ್ರೀನಿವಾಸ ಪೂಜಾರಿಯವರು ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಅವರು ಹೆಚ್ಚು ಜನರು ಒಮ್ಮೆಲೇ ಸೇರುವ ಕಾರಣದಿಂದಾಗಿ ಮಾಲ್, ಸೆಲೂನ್, ಬಾರ್, ರೆಸ್ಟೂರೆಂಟ್, ಬ್ಯೂಟಿಪಾರ್ಲರ್, ದಂತ ಚಿಕಿತ್ಸಾಲಯಕ್ಕೆ ಅವಕಾಶ ನೀಡಲಾಗುವುದಿಲ್ಲ. ಉಳಿದಂತೆ ಎಲ್ಲಾ ಅಂಗಡಿ ಮುಗ್ಗಟ್ಟುಗಳು ತೆರೆಯಲು ಅವಕಾಶ ನೀಡಲಾಗುವುದು ಎಂದು ತಿಳಿಸಿದ್ದಾರೆ.
ನಾಳೆಯಿಂದ ಎಲ್ಲಾ ವೈನ್ ಶಾಪ್‍ಗಳಲ್ಲಿ ಮದ್ಯ ಮಾರಾಟಕ್ಕೆ ಅವಕಾಶವಿದೆ. ಆದರೆ ಅಲ್ಲಿ ಮಾರಾಟ ಮಾಡಲು ಮಾತ್ರ ಅವಕಾಶ ಅಲ್ಲಿ ಮದ್ಯಪಾನ ಮಾಡಲು ಅವಕಾಶವಿಲ್ಲ. ಬಾರ್ ಆಂಡ್ ರೆಸ್ಟೂರೆಂಟ್‍ಗಳಿಗೆ ತೆರೆಯಲು ಅವಕಾಶವಿಲ್ಲ ಎಂದು ಹೇಳಿದ್ದಾರೆ.  ಬೇರೆ ಜಿಲ್ಲೆಗಳಿಗೆ ಹೋಗಬೇಕಾದ್ದಲ್ಲಿ ಪಾಸ್ ಬೇಕು. ಬಸ್‍ಗಳ ಓಡಾಟಕ್ಕೆ ಅವಕಾಶ ನೀಡಿಲ್ಲ. ಆಟೋ, ಕ್ಯಾಬ್‌ಗಳಲ್ಲಿ ಚಾಲಕ ಮತ್ತು ಇಬ್ಬರು ಪ್ರಯಾಣಿಕರಿಗೆ ಅವಕಾಶ ಖಾಸಗಿ ವಾಹನಗಳಾದ ಬೈಕ್ ಮತ್ತು ಕಾರುಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಕಾರುಗಳಲ್ಲಿ ಚಾಲಕ ಸೇರಿ ಇಬ್ಬರು ಪ್ರಯಾಣಿಕರು ಮತ್ತು ಬೈಕ್‌ಗಳಲ್ಲಿ ಒಬ್ಬರಷ್ಟೇ ಪ್ರಯಾಣಿಸಲು ಅನುಮತಿ ನೀಡಲಾಗಿದೆ. ಎಲ್ಲಾ ಕೈಗಾರಿಕಾ ಕೇಂದ್ರಗಳು ಕಾರ್ಯ ನಿರ್ವಹಿಸಲು ಅವಕಾಶವಿದೆ ಎಂದರು

Related posts

Leave a Reply

Your email address will not be published. Required fields are marked *