Header Ads
Breaking News

ಧ. ಗ್ರಾ. ಯೋ. ಬಿ. ಸಿ. ಟ್ರಸ್ಟ್ ಜಿಲ್ಲಾ ಕಛೇರಿ ಉದ್ಘಾಟನೆ : ಪುತ್ತೂರಿಗೆ ಆಗಮಿಸಲಿರುವ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ

ಪುತ್ತೂರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ದ. ಕ. ಜಿಲ್ಲೆ-2 ಪುತ್ತೂರಿನ ಜಿಲ್ಲಾ ಕಛೇರಿ ಉದ್ಘಾಟನಾ ಸಮಾರಂಭವು ಡಿ. 9ರಂದು ಸಾಲ್ಮರ ಕೊಟೇಚಾ ಹಾಲಿನಲ್ಲಿ ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ.

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಕಾರ್ಯಕ್ರಮ ಉದ್ಘಾಟಿಸಲಿದ್ಧು, ಶಾಸಕ ಸಂಜೀವ ಮಠಂದೂರು ಅಧ್ಯಕ್ಷತೆ ವಹಿಸಲಿದ್ದಾರೆ. ನಗರಸಭಾ ಅಧ್ಯಕ್ಷ ಜೀವಂಧರ್ ಜೈನ್, ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ಧ. ಗ್ರಾ. ಯೋ. ಬಿ. ಸಿ. ಟ್ರಸ್ಟ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಎಲ್. ಎಚ್. ಮಂಜುನಾಥ್, ಪುತ್ತೂರಿನ ಜನಪ್ರಿಯ ವೈದ್ಯ ಡಾ. ಎಂ. ಕೆ.ಪ್ರಸಾದ್ ಭಂಡಾರಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ತಾಲ್ಲೂಕು ಅಧ್ಯಕ್ಷ ಮಹಾಬಲ ರೈ ವಳತ್ತಡ್ಕ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷ ಬಾಲಕೃಷ್ಣ ಗೌಡ ಹಾರ್ಪಳ ಇವರು ಭಾಗವಹಿಸಲಿದ್ದಾರೆ.

Related posts

Leave a Reply

Your email address will not be published. Required fields are marked *