Header Ads
Breaking News

ಮಂಗಳೂರಿನಲ್ಲಿ ಪ್ರಾಪರ್ಟಿ ಕಾರ್ಡ್ ಸಮಸ್ಯೆ : ಪ್ರಾಪರ್ಟಿ ಕಾರ್ಡ್ ಕಚೇರಿಗೆ ಐವನ್ ಡಿಸೋಜಾ ಭೇಟಿ

ಮಂಗಳೂರು ನಗರ ವ್ಯಾಪ್ತಿಯಲ್ಲಿ ಪ್ರಾಪರ್ಟಿ ಕಾರ್ಡ್ ಸಮಸ್ಯೆ ಬಿಗಡಾಯಿಸಿದೆ. ಈ ನಿಟ್ಟಿನಲ್ಲಿ ಇಂದು ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜಾ ಅವರು ಮಂಗಳೂರಿನ ಮಿನಿ ವಿಧಾನಸೌಧದಲ್ಲಿರುವ ಪ್ರಾಪರ್ಟಿ ಕಾರ್ಡ್ ಕಚೇರಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಇನ್ನು ಅಧಿಕಾರಿಗಳೊಂದಿಗೆ ಮಾಹಿತಿ ಪಡೆದ ಐವನ್ ಡಿಸೋಜಾ ಅವರು, ಎಲ್ಲರು ಕೂಡ ಪ್ರಾಪರ್ಟಿ ಕಾರ್ಡ್‌ನ್ನ ಮಾಡಿಸಬೇಕು. ಕಡ್ಡಾಯವಾಗಿ ಮಾಡುವ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಅವರ ನೇತೃತ್ವದಲ್ಲಿ ಸಭೆಯನ್ನು ನಡೆಸಿ ತೀರ್ಮಾನಿಸಲಾಗುವುದು ಅಂತಾ ತಿಳಿಸಿದರು.ಇನ್ನು ಪ್ರಾಪರ್ಟಿ ಕಾರ್ಡ್ ಕಡ್ಡಾಯ ಆದೇಶದಿಂದ ಆಗಿರುವ ಸಮಸ್ಯೆಯ ಬಗ್ಗೆ ಕಂದಾಯ ಸಚಿವರ ಗಮನಕ್ಕೆ ತಂದು ಸಮಸ್ಯೆಯನ್ನ ಪರಿಹಾರಕ್ಕೆ ಯತ್ನಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

Related posts

Leave a Reply

Your email address will not be published. Required fields are marked *