Header Ads
Header Ads
Header Ads
Header Ads
Header Ads
Header Ads
Breaking News

ನನ್ನದು ತಂತಿ ಮೇಲಿನ ನಡಿಗೆ ಸಿಎಂ ಹೇಳಿಕೆ ವಿಚಾರ : ಉಡುಪಿಯಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದೇನು?

ನನ್ನದು ತಂತಿ ಮೇಲಿನ ನಡಿಗೆ’ ಎಂಬ ಸಿಎಂ ಯಡ್ಯೂರಪ್ಪ ಅಸಹಾಯಕತೆಗೆ ಸಂಸದೆ ಶೋಭಾ ಕರಂದ್ಲಾಜೆ ಸಮರ್ಥನೆ ಮಾಡಿದ್ದಾರೆ.ಉಡುಪಿಯಲ್ಲಿ ಮಾತನಾಡಿದ ಅವರು ಸಿಎಂ ಹೇಳಿಕೆ ಸಹಜ, ಯಾಕೆಂದ್ರೆ ಉಪಚುನಾವಣೆ ಇನ್ನಷ್ಟೇ ಆಗಬೇಕು. ನಮ್ಮಲ್ಲಿ ಕೇವಲ 106 ಮಂದಿ ಶಾಸಕರಿದ್ದಾರೆ. ಬಹುಮತ ಸಾಧಿಸಲು 113 ಆಗಲೇಬೇಕು. ಬಹುಮತ ಸಿಗುವ ತನಕ ನಮ್ಮದು ತಂತಿ ಮೇಲಿನ ನಡಿಗೆ. ಉಪಚುನಾವಣೆಯಲ್ಲಿ ಶಾಸಕರನ್ನು ಗೆಲ್ಲಿಸುವ ಪ್ರಯತ್ನ ಮಾಡಬೇಕಿದೆ. ಸರ್ಕಾರ ಸ್ಥಿರ ಆದಮೇಲೆ ಯಾವುದೇ ಸಮಸ್ಯೆ ಇರಲ್ಲ ಎಂದರು.
ಸವದಿ, ಕತ್ತಿ ಅಸಮಾಧಾನ ಹೇಳಿಕೆ ವಿಚಾರದ ಬಗ್ಗೆ ಪ್ರತಿಕ್ರೀಯಿಸಿದ ಅವರು ಸರ್ಕಾರದಲ್ಲಿ ಮಂತ್ರಿಗಳಾಗಿರುವವರ ಸಂಖ್ಯೆ ಕಡಿಮೆ ಇದೆ. ಹಿರಿಯ ಶಾಸಕರಿಗೆಲ್ಲಾ ಮಂತ್ರಿ ಆಗುವ ಅಪೇಕ್ಷೆ ಇದೆ. ಅಪೇಕ್ಷೆ ತಪ್ಪಲ್ಲ, ಯಾಕೆಂದ್ರೆ ಅನೇಕ ಬಾರಿ ಗೆದ್ದಿದ್ದಾರೆ. ತೃಪ್ತಿ ಪಡಿಸುವುದು ಸಹಜವಾಗಿ ಕಷ್ಟದ ಕೆಲಸ ಎಂದರು.

Related posts

Leave a Reply

Your email address will not be published. Required fields are marked *