Header Ads
Header Ads
Header Ads
Breaking News

ನಮ್ಮ ಕುಡ್ಲ ವಾಹಿನಿ ವತಿಯಿಂದ ಗೂಡುದೀಪ ಸ್ಪರ್ಧೆ ಅಕ್ಟೋಬರ್ ೧೭ರಂದು ಕುದ್ರೋಳಿ ಕ್ಷೇತ್ರದಲ್ಲಿ ಸ್ಪರ್ಧೆ

ನಮ್ಮ ಕುಡ್ಲ ವಾಹಿನಿ ವತಿಯಿಂದ ಗೂಡುದೀಪ ಸ್ಪರ್ಧೆ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಅಕ್ಟೋಬರ್ ೧೭ರಂದು ಕುದ್ರೋಳಿ ಕ್ಷೇತ್ರದಲ್ಲಿ ನಡೆಯಲಿದೆ ಎಂದು ನಮ್ಮ ಕುಡ್ಲ ವಾಹಿನಿ ನಿರ್ದೇಶಕ ಹರೀಶ್ ಬಿ ಕರ್ಕೇರಾ ಹೇಳಿದ್ರು.ಈ ಬಗ್ಗೆ ಮಂಗಳೂರಿನಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವ್ರು, ಸಾಂಪ್ರದಾಯಿಕ , ಆಧುನಿಕ ಮತ್ತು ವಿಶೇಷ ಮಾದರಿಯಲ್ಲಿ ಗೂಡುದೀಪ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಪ್ರತಿಯೊಂದು ವಿಭಾಗದಲ್ಲೂ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆಯುವ ಗೂಡುದೀಪಗಳಿಗೆ ಚಿನ್ನದ ಪದಕ ವನ್ನು ಹಾಗೂ ತೃತೀಯ ಸ್ಥಾನ ಪಡೆಯುವ ಗೂಡುದೀಪಗಳಿಗೆ ಬೆಳ್ಳಿಯ ಪದಕವನ್ನು ಬಹುಮಾನವಾಗಿ ನೀಡಲಾಗುವುದು.

ಅತೀ ಹೆಚ್ಚು ಗೂಡುದೀಪ ತರುವ ಸಂಸ್ಥೆಗಳಿಗೆ ವಿಶೇಷ ಬಹುಮಾನವನ್ನು ನೀಡಲಾಗುವುದು ಅಂತಾ ತಿಳಿಸಿದರು. ಇನ್ನು ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ೩ಮಂದಿಗೆ ಪ್ರಶಸ್ತಿ ಪುರಸ್ಕಾರವನ್ನು ನೀಡಲಾಗುತ್ತಿದೆ.ಶಾರದಾ ವಿದ್ಯಾಲಯ ಶಿಕ್ಷಣ ಸಂಸ್ಥೆ ಅಧ್ಯಕ್ಷ ಪ್ರೋ.ಎಂ.ಬಿ.ಪುರಾಣಿಕ್, ಭರತ ನಾಟ್ಯ ಗುರು ಉಳ್ಳಾಲ ಮೋಹನ ಕುಮಾರ್ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ವಿಶೇಷ ಸಾಧೆನ ಮಾಡಿದ ಸುಶಾನ್ ಅತ್ತಾವರ ಅವ್ರಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು ಎಂದು ತಿಳಿಸಿದರು.ಸುದ್ದಿಗೋಷ್ಠಿಯಲ್ಲಿ ಕದ್ರಿ ನವನೀತ ಶೆಟ್ಟಿ, ಪ್ರೋ. ಎಂ.ಎಸ್.ಕೋಟ್ಯಾನ್, ದಯಾನಂದ ಕಟೀಲು, ಲೀಲಾಕ್ಷ ಬಿ.ಕರ್ಕೇರಾ ಮತ್ತಿತರು ಉಪಸ್ಥತರಿದ್ರು.

Related posts

Leave a Reply