Header Ads
Header Ads
Breaking News

ನಮ್ಮ ಹಕ್ಕು ನಮಗೆ ಕೊಡಿ ಎಂಬ ಘೋಷಣೆಯೊಂದಿಗೆ ನಗರಸಭಾ ಸದಸ್ಯರಿಂದ ಪಾದಯಾತ್ರೆ

ಪುತ್ತೂರು: ನಗರಸಭೆ ಚುನಾವಣೆ ನಡೆದ ಬಳಿಕವೂ ಇನ್ನೂ ಅಧಿಕಾರ ಸಿಕ್ಕಿಲ್ಲ ಎಂದು ನಗರಸಭಾ ಸದಸ್ಯರು ಹಾಗೂ ಕಾರ್ಯಕರ್ತರು ತಮ್ಮ ಅಧಿಕಾರಕ್ಕಾಗಿ ನಮ್ಮ ಹಕ್ಕು ನಮಗೆ ಕೊಡಿ ಎಂಬ ಘೋಷಣೆಯೊಂದಿಗೆ ಕೆಮ್ಮಿಂಜೆ ದೇವಸ್ಥಾನದ ಬಳಿಯಿಂದ ಮಿನಿ ವಿಧಾನ ಸೌಧ ತನಕ ಪಾದಯಾತ್ರೆ ಕೈಗೊಂಡಿದ್ದು, ಪಾದಯಾತ್ರೆ ಆರಂಭಗೊಂಡಿದೆ. ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಗೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಇರುವ ತಕರಾರು ಅರ್ಜಿಯಂದಾಗಿ ನಗರಸಭೆ ಚುನಾವಣೆ ನಡೆದು 8 ತಿಂಗಳು ಕಳೆದರೂ ಈಗಲೂ ಆಡಳಿತಾಧಿಕಾರಿಗಳೇ ಅಧಿಕಾರ ನಡೆಸುತ್ತಿದ್ದಾರೆ. ಚುನಾಯಿತ ಸದಸ್ಯರಿಗೆ ಇನ್ನೂ ಅಧಿಕಾರ ಸಿಕ್ಕಿಲ್ಲ. ಸದಸ್ಯರನ್ನು ನಂಬಿದ ಸ್ಥಳಿಯ ನಾಗರಿಕರು ಅಭಿವೃದ್ಧಿ ವಿಚಾರಕ್ಕಾಗಿ ಸದಸ್ಯರನ್ನು ಪ್ರಶ್ನಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಚುನಾಯಿತ ಸದಸ್ಯರಿಗೆ ನಗರಸಭೆಯ ಅಧಿಕಾರ ಹಸ್ತಾಂತರಿಸುವಂತೆ ಪಾದಯಾತ್ರೆಯ ಮೂಲಕ ಸದಸ್ಯರು ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಬಿಜೆಪಿ ಜಿಲ್ಲಾಧ್ಯಕ್ಷರಾಗಿರುವ ಶಾಸಕ ಸಂಜೀವ ಮಠಂದೂರು, ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ್ ಪೂಜಾರಿ, ಬಿಜೆಪಿ ನಗರ ಮಂಡಲದ ಅಧ್ಯಕ್ಷ ಜೀವಂಧರ್ ಜೈನ್ ಸೇರಿದಂತೆ ಸದಸ್ಯರು ಹಾಗೂ ಬಿಜೆಪಿ ಕಾರ್ಯಕರ್ತರು ಪಾದಯಾತ್ರೆಯಲ್ಲಿ ಭಾಗವಹಿಸಿದ್ದಾರೆ.

Related posts

Leave a Reply

Your email address will not be published. Required fields are marked *