Header Ads
Header Ads
Breaking News

ನರಿಂಗಾನದ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ 1ನೇ ತರಗತಿಯಿಂದ ಆಂಗ್ಲ ಮಾಧ್ಯಮ ಶಿಕ್ಷಣಕ್ಕೆ ಚಾಲನೆ

ಶಾಲೆಗಳಿಗೆ ಕ್ರಿಯಾ ಯೋಜನೆ ಕೊಟ್ಟರೆ ಸರಕಾರ ತಕ್ಷಣವೇ ಅನುದಾನ ಬಿಡುಗಡೆ ಮಾಡಲಿದೆ. ಕನ್ನಡ ಮಾಧ್ಯಮ ಬೆಳೆಯಬೇಕಾದರೆ ಇತರ ಮಾಧ್ಯಮ ಶಿಕ್ಷಣವನ್ನು ಗೌರವಿಸಬೇಕು, ಆ ನಿಟ್ಟಿನಲ್ಲಿ ಮುಂದಿನ ಮೂವತ್ತು ವರ್ಷಗಳ ಪರಿಸ್ಥಿತಿ ಹೇಗಿರಬಹುದು ಎಂಬುದನ್ನು ಮನಗಂಡು ಜನಸಾಮಾನ್ಯರ ಮಕ್ಕಳಿಗೂ ಆಂಗ್ಲ ಭಾಷಾ ಶಿಕ್ಷಣ ಲಭಿಸುವಂತಾಗಬೇಕು ಎಂಬ ನೆಲೆಯಲ್ಲಿ ಸರಕಾರ ಬಹಳಷ್ಟು ಯೋಜನೆ ತಂದಿದ್ದು ಕರ್ನಾಟಕ ಪಬ್ಲಿಕ್ ಸ್ಕೂಲ್ ಅದರಲ್ಲಿ ಒಂದಾಗಿದೆ ಎಂದು ಜಿಲ್ಲ ಉಸ್ತುವಾರಿ ಸಚಿವ ಯು.ಟಿ. ಖಾದರ್ ಹೇಳಿದರು.

ಕರ್ನಾಟಕ ಸರಕಾರ, ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಬಂಟ್ವಾಳ ತಾಲೂಕಿನ ನರಿಂಗಾನ ಗ್ರಾಮದ ಮೊಂಟೆಪದವಿನಲ್ಲಿ ಆರಂಭಿಸಲಾದ ಕರ್ನಾಟಕ ಪಬ್ಲಿಕ್ ಸ್ಕೂಲ್ ಎಲ್ ಕೆಜಿ ಹಾಗೂ ಒಂದನೇ ತರಗತಿಯ ಆಂಗ್ಲ ಮಾಧ್ಯಮ ಶಿಕ್ಷಣಕ್ಕೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು.

ಬಂಟ್ವಾಳ ತಾಲೂಕು ಕ್ಷೇತ್ರ ಶಿಕ್ಷಣಾಕಾರಿ ಶಿವಪ್ರಕಾಶ್ ಮಾತನಾಡಿ ಎಂಟು ಸಾವಿರ ಮಕ್ಕಳು ಸರಕಾರಿ ಕನ್ನಡ ಮಾಧ್ಯಮ ಶಾಲೆಯಿಂದ ದೂರವಾಗಿ ದೂರವಾಗಿದ್ದರೂ ಆಂಗ್ಲ ಭಾಷಣ ಶಿಕ್ಷಣದ ವ್ಯಾಮೋಹದ ಮೇಲೆ ಮತ್ತೆ ಸರಕಾರಿ ಶಾಲೆಯನ್ನು ಸೇರಿದ್ದಾರೆ ಎಂದು ನುಡಿದರು.
ನರಿಂಗಾನ ಗ್ರಾಮ ಪಂಚಾಯಿತಿ ಅಧ್ಯಕ್ಷ ಇಸ್ಮಾಯಿಲ್ ಮೀನಂಕೋಡಿ ಅಧ್ಯಕ್ಷತೆ ವಹಿಸಿದ್ದರು.

ಜಿಲ್ಲಾ ಪಂಚಾಯಿತಿ ಸದಸ್ಯೆ ಮಮತಾ ಡಿ.ಎಸ್. ಗಟ್ಟಿ, ಮೊಂಟೆಪದವು ಸರಕಾರಿ ಪದವಿಪೂರ್ವ ಕಾಲೇಜು ಎಸ್‌ಡಿಎಂಸಿ ಕಾರ್ಯಾಧ್ಯಕ್ಷ ಅಬ್ದುಲ್ ಜಲೀಲ್ ಮೋಂಟುಗೋಳಿ, ಪ್ರೌಢಾ ಶಾಲಾ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮುರಳೀಧರ ಶೆಟ್ಟಿ ಮೋರ್ಲ ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *