Header Ads
Breaking News

ನವೆಂಬರ್ ಅಂತ್ಯಕ್ಕೆ ಯಕ್ಷಗಾನ ಪ್ರದರ್ಶನಗಳು ಮತ್ತೆ ಆರಂಭ

ಮಹಾಮಾರಿ ಕೋವಿಡ್ ಕಾರಣದಿಂದಾಗಿ ಕಳೆದ ವರ್ಷ ಅರ್ಧಕ್ಕೇ ನಿಂತುಹೋಗಿದ್ದ ಕರಾವಳಿಯ ಗಂಡುಕಲೆ ಯಕ್ಷಗಾನ ಪ್ರದರ್ಶನಗಳು ಮತ್ತೆ ಆರಂಭಗೊಳ್ಳುವ ಭರವಸೆ ಲಭಿಸಿದೆ. ಯಕ್ಷಗಾನ ಕಲಾವಿದರು ವೃತ್ತಿಯನ್ನು ಕಳೆದುಕೊಳ್ಳಬಾರದು ಎಲ್ಲಾ ರೀತಿಯ ಸೂಕ್ತ ಮುಂಜಾಗೃತ ಕ್ರಮದೊಂದಿಗೆ ಸಂಪ್ರದಾಯದ ಪ್ರಕಾರ ಕರಾವಳಿಯ ಗಂಡುಕಲೆ ಯಕ್ಷಗಾನ ಜಿಲ್ಲೆಯಾದ್ಯಂತ ನವೆಂಬರ್ ಅಂತ್ಯಕ್ಕೆ ಪ್ರದರ್ಶನಗೊಳ್ಳಲಿದೆ ಎಂದು ಮುಜುರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲೆಯ ಯಕ್ಷಗಾನ ಮೇಳಗಳ ಸಂಚಾಲಕರ ಸಭೆ ನಡೆದಿದ್ದು, ಸಭೆಯಲ್ಲಿ ಉಸ್ತುವಾರಿ ಸಚಿವರು ಈ ಭರವಸೆ ನೀಡಿದ್ದಾರೆ. ಕೋವಿಡ್‍ನಿಂದಾಗಿ ಯಕ್ಷಗಾನ ಕಲಾವಿದರ ಸ್ಥಿತಿ ಸಂಕಷ್ಟದಲ್ಲಿ ಸಿಲುಕಿದ್ದು, ಯಾವುದೇ ಕಲಾವಿದನಿಗೆ ಅನ್ಯಾಯವಾಗದಂತೆ ಶೀಘ್ರದಲ್ಲಿಯೇ ಸರಕಾರದಿಂದ ಆರ್ಥಿಕ ನೆರವು ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಟೀಲು, ಬಪ್ಪನಾಡು, ಸಸಿಹಿತ್ಲು ಸೇರಿದಂತೆ 20 ಕ್ಕೂ ಹೆಚ್ಚು ವೃತ್ತಿಪರ ತೆಂಕುತಿಟ್ಟಿನ ಯಕ್ಷಗಾನ ಮೇಳಗಳಿದ್ದು, ಸರಿ ಸುಮಾರು ಒಂದು ಸಾವಿರಕ್ಕೂ ಹೆಚ್ಚು ಕಲಾವಿದರು ಮತ್ತು ಪೂರಕ ಕೆಲಸಗಾರರಿದ್ದಾರೆ. ನವೆಂಬರ್ ಅಂತ್ಯಕ್ಕೆ ಯಕ್ಷಗಾನ ಬಯಲಾಟ ಆರಂಭವಾಗಲಿದ್ದು, ಕಲಾವಿದರ ಹಾಗೂ ಸಾರ್ವಜನಿಕರ ಆರೋಗ್ಯ ಕಾಪಾಡುವುದು ಆದ್ಯ ಕರ್ತವ್ಯವಾಗಿರುವುದರಿಂದ ಸರಕಾರದ ಮಾರ್ಗಸೂಚಿಯಂತೆ ಆರೋಗ್ಯ ಇಲಾಖೆಯ ವತಿಯಿಂದ ಯಕ್ಷಗಾನ ಕಲಾವಿದರು ಪ್ರಾರಂಭಕ್ಕೂ ಮುನ್ನ ಕಡ್ಡಾಯವಾಗಿ ಕೊರೋನಾ ಪರೀಕ್ಷೆಯನ್ನು ಮಾಡಿಸಿಕೊಳ್ಳಬೇಕು. ಇದರ ಜೊತೆಗೆ ಯಕ್ಷಗಾನ ಮೇಳಗಳಲ್ಲಿಯೂ ಸಹ ವಾರಕ್ಕೆ ಒಂದು ಬಾರಿ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಬೇಕು. ಎಲ್ಲಾ ಕಲಾವಿದರು ಹೊಸ ಹುಮ್ಮಸ್ಸಿನಿಂದ ಮಾನಸಿಕ ಮತ್ತು ದೈಹಿಕವಾಗಿ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಯಾವ ಕಲಾವಿದರು ಕೆಲಸವಿಲ್ಲದೆ ಕೂರಬಾರದು ಎಂದು ಉಸ್ತುವಾರಿ ಸಚಿವರು ಹೇಳಿದ್ದಾರೆ.

Related posts

Leave a Reply

Your email address will not be published. Required fields are marked *