Header Ads
Header Ads
Breaking News

ನಾಡಿನಾದ್ಯಂತ ’ಈದುಲ್ ಫಿತ್ರ್’ ಹಬ್ಬದ ಸಂಭ್ರಮ : ಸಚಿವ ಯು.ಟಿ.ಖಾದರ್‌ರಿಂದ ಜನತೆಗೆ ಹಬ್ಬದ ಶುಭಾಶಯ

ಇಂದು ನಾಡಿನಾದ್ಯಂತ ಈದುಲ್ ಫಿತರ್‌ನ ಸಂಭ್ರಮ ಮನೆ ಮಾಡಿದೆ. ಮುಸ್ಲಿಂ ಬಾಂಧವರು ಒಂದು ತಿಂಗಳ ರಂಝಾನ್ ಉಪವಾಸ ಮುಗಿಸಿ ಹಬ್ಬದ ಸಂಭ್ರಮಾಚರಣೆಯಲ್ಲಿ ತೊಡಗಿಸಿಕೊಂಡಿದ್ದು, ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ ಹಾಗೂ ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಳ್ಳುವಲ್ಲಿ ತೊಡಗಿಸಿಕೊಂಡಿದ್ದಾರೆ.

ಅದರಂತೆ ಮಂಗಳೂರಿನ ಬಾವುಟಗುಡ್ಡೆಯಲ್ಲಿರುವ ಈದ್ಗಾ ಮಸೀದಿಯಲ್ಲಿ ಬೆಳ್ಳಂಬೆಳಗ್ಗೆ ಸಾವಿರಾರು ಮಂದಿ ಮುಸ್ಲಿಂ ಬಾಂಧವರು ಸಾಮೂಹಿಕ ನಮಾಝ್ ಸಲ್ಲಿಸಿದರು. ದ.ಕ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಕೂಡಾ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ, ನಾಡಿನ ಜನತೆಗೆ ರಂಝಾನ್ ಹಬ್ಬದ ಶುಭ ಕೋರಿದರು. ಈ ವೇಳೆ ಮಾಜಿ ಶಾಸಕ ಜೆ.ಆರ್.ಲೋಬೋ, ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜ ಕೂಡಾ ಪಾಲ್ಗೊಂಡು ಮುಸ್ಲಿಂ ಬಾಂಧವರಿಗೆ ಶುಭಾಶಯ ಸಲ್ಲಿಸಿದ್ದಾರೆ.

Related posts

Leave a Reply

Your email address will not be published. Required fields are marked *