Header Ads
Breaking News

ನೇಣು ಬಿಗಿದು ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ…!

ಉಡುಪಿ: ಕಾಲೇಜು ವಿದ್ಯಾರ್ಥಿನಿಯೊರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯಲ್ಲಿ ನಡೆದಿರುವುದು ಶನಿವಾರ ಬೆಳಿಗ್ಗೆ ಬೆಳಕಿಗೆಬಂದಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲವಾಗಿದ್ದು, ಪೊಲೀಸರು ತನಿಖೆ ನೆಡೆಸುತ್ತಿದ್ದಾರೆ.

ಮೃತ ಯುವತಿ ನಗರದ ಕಾಲೇಜೊಂದರಲ್ಲಿ ಅಂತಿಮ ಪದವಿ ಕಲಿಯುತ್ತಿರುವ ವಿಕ್ಷಿತಾ ಕೆ.ವಿ ಎಂದು ಗುರುತಿಸಲಾಗಿದೆ. ವಿದ್ಯಾರ್ಥಿನಿ ಬೀಡಿನಗುಡ್ಡೆ ಹರಿಶ್ಚಂದ್ರ ಮಾರ್ಗ ಇಲ್ಲಿ ವಾಸ್ತವ್ಯ ಹೂಡಿರುವ ಪಿ.ಜಿ ಸೆಂಟರಿನ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ತಿಳಿದು ಬಂದಿದೆ. ವಿದ್ಯಾರ್ಥಿನಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ನಿವಾಸಿಯೆಂದು ತಿಳಿದುಬಂದಿದೆ. ಕಾನೂನು ಪ್ರಕ್ರಿಯೆ ನಡೆಸಲು ಶವವನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶವ ಶವಾಗಾರಕ್ಕೆ ಸಾಗಿಸಲು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಇಲಾಖೆಗೆ ಉಚಿತ ಅಂಬುಲೇನ್ಸ್ ಸೇವೆ ಒದಗಿಸಿ ಸಹಕರಿಸಿದ್ದಾರೆ.

Related posts

Leave a Reply

Your email address will not be published. Required fields are marked *