Header Ads
Breaking News

ಪಂಚಾಯತ್ ಅಧ್ಯಕ್ಷರಿಗೆ ಹೈವೇ ಪೊಲೀಸರಿಂದ ನಿಂದನೆ ಆರೋಪ : ಗ್ರಾಮಸ್ಥರಿಂದ ಪ್ರತಿಭಟನೆಯ ಎಚ್ಚರಿಕೆ

ಮಂಜೇಶ್ವರ: ಮಂಜೇಶ್ವರದ ಗ್ರಾಮ ಪಂಚಾಯತ್ ಅಧ್ಯಕ್ಷರನ್ನು ರಸ್ತೆ ಮಧ್ಯೆ ನಿಲ್ಲಿಸಿ ಅವಾಚ್ಯ ಶಬ್ಧಗಳಿಂದ ನಿಂದಿಸಿ ಅವಮಾನಿಸಲಾಗಿದೆ. ಈ ಬಗ್ಗೆ ಕ್ಷಮೆ ಯಾಚಿಸದಿದ್ದಲ್ಲಿ ಮಂಜೇಶ್ವರ ಗ್ರಾಮಸ್ಥರು ಪ್ರತಿಭಟನೆಯ ಎಚ್ಚರಿಕೆಯನ್ನು ನೀಡಿದ್ದಾರೆ.

ಮಂಜೇಶ್ವರ ಗ್ರಾಮಪಂಚಾಯತ್ ಅಧ್ಯಕ್ಷ ಅಬ್ದುಲ್ ಅಝೀಝ್ ಹಾಜಿಯವರು ಚುನಾವಣಾ ಕರ್ತವ್ಯಕ್ಕಾಗಿ ಟ್ರಾಫಿಕ್ ನಿಯಮಗಳನ್ನು ಪಾಲಿಸಿಕೊಂಡು ದ್ವಿಚಕ್ರ ವಾಹನದಲ್ಲಿ ತಲಪಾಡಿಯಿಂದ ಮಂಜೇಶ್ವರ ಕಡೆಗೆ ತೆರಳುತ್ತಿದ್ದರು. ಇದೇ ವೇಳೆಯಲ್ಲಿ ಉದ್ಯಾವರ ರಾಷ್ಟ್ರೀಯ ಹೆದ್ದಾರಿಯ ವಾಹನ ತಪಾಸಣೆಯಲ್ಲಿ ನಿರತನಾಗಿದ್ದ ಪೊಲೀಸ್ ಪೇದೆ ತಡೆದು ನಿಲ್ಲಿಸಿದ್ದರು. ಇದೇ ವೇಳೆ ಪಂಚಾಯತ್ ಅಧ್ಯಕ್ಷನೆಂದು ಪರಿಚಯ ಮಾಡಿಕೊಂಡರೂ ಲೆಕ್ಕಿಸದೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆಂದು ದೂರಲ್ಲಿ ತಿಳಿಸಿದ್ದಾರೆ. ಇನ್ನು ಪೊಲೀಸರ ಈ ವರ್ತನೆ ಬಗ್ಗೆ ಖಂಡನೆ ವ್ಯಕ್ತಪಡಿಸಿದ್ದು ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆ ಮಾಡುವುದಾಗಿ ಎಚ್ಚರಿಸಿದ್ದಾರೆ.

Related posts

Leave a Reply

Your email address will not be published. Required fields are marked *