Header Ads
Breaking News

ಪತಿ ಮೇಲೆ ಹಲ್ಲೆಗೆ ಯತ್ನಿಸಿದ ಮಹಿಳೆ : ತಡೆಯಲು ಹೋದ ಪುತ್ತೂರಿನ ಮಹಿಳಾ ಎಸ್.ಐ ಮೇಲೆ ಹಲ್ಲೆ

ದೂರು ಅರ್ಜಿಯೊಂದರ ವಿಚಾರಣೆ ವೇಳೆ ಮಹಿಳೆಯೊಬ್ಬರು ತನ್ನ ಗಂಡನಿಗೆ ಹಲ್ಲೆ ನಡೆಸಲು ಮುಂದಾದಾಗ ತಡೆಯಲು ಹೋದ ಮಹಿಳಾ ಠಾಣಾ ಎಸ್.ಐ.ಅವರಿಗೆ ಮಹಿಳೆಯರಿಬ್ಬರು ಹಲ್ಲೆ ನಡೆಸಿದ ಘಟನೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಬಗ್ಗೆ ವರದಿಯಾಗಿದೆ. ಹಲ್ಲೆ ನಡೆಸಿದ ಆರೋಪಿ ಮಹಿಳೆಯರನ್ನು ಬಂಧಿಸಲಾಗಿದೆ.
ಮಹಿಳಾ ಪೊಲೀಸ್ ಠಾಣೆಯ ಎಸ್.ಐ ಸೇಸಮ್ಮ ಅವರು ಹಲ್ಲೆಗೊಳಗಾದವರು. ಸಾಲ್ಮರ ಮುದ್ದೋಡಿ ನಿವಾಸಿ ಲಾರೆನ್ಸ್ ಡಿ’ಸೋಜ ಅವರ ಪತ್ನಿ ಬೇಬಿ ಡಿಸೋಜ(34ವ) ಮತ್ತು ಹಾಸನ ಚೆನ್ನರಾಯಪಟ್ಟಣದ ನುಗ್ಗೆಹಳ್ಳಿ ನೆಟ್ಟಕೆರೆ ಗೋಪಾಲ ಎಂಬವರ ಪತ್ನಿ ಆಶಾ(35ವ) ಹಲ್ಲೆ ನಡೆಸಿದ ಆರೋಪಿಗಳು ಎಂದು ಹೆಸರಿಸಲಾಗಿದೆ.
ಘಟನೆಯ ಕುರಿತು ಮಹಿಳಾ ಪೊಲೀಸ್ ಠಾಣೆಯ ಸಿಬ್ಬಂದಿಯೊಬ್ಬರು ನೀಡಿದ ದೂರಿನಂತೆ ಪುತ್ತೂರು ನಗರಪೊಲೀಸ್  ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹಲ್ಲೆ ನಡೆಸಿದ ಬೇಬಿ ಡಿಸೋಜ ಮತ್ತು ಆಶಾ ಸಹೋದರಿಯರನ್ನು ಪೊಲೀಸ್ ರು ಬಂಧಿಸಿದ್ದಾರೆ.

Related posts

Leave a Reply

Your email address will not be published. Required fields are marked *