Header Ads
Breaking News

ಪತ್ರಕರ್ತ, ಸ್ಯಾಕ್ಸೊಫೋನ್ ವಾದನ ದಯಾನಂದ ಅವರಿಗೆ ಶ್ರದ್ಧಾಂಜಲಿ; ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದಿಂದ ಕಾರ್ಯಕ್ರಮ

ಪತ್ರಕರ್ತ ಸ್ಯಾಕ್ಸೋಫೋನ್ ವಾದಕ ದಯಾನಂದ್ ಕುಡುಪು ಅವರು ನಿಧನರಾಗಿದ್ದು, ಅವರಿಗೆ ಶ್ರದ್ದಾಂಜಲಿ ಸಲ್ಲಿಸುವ ಕಾರ್ಯಕ್ರಮ ಮಂಗಳೂರಿನ ಪತ್ರಿಕಾಭವನದಲ್ಲಿ ನಡೆಯಿತು. ಪತ್ರಕರ್ತರು ದಯಾನಂದ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಇದೇ ವೇಳೆ ಮಾತನಾಡಿ ಪತ್ರಕರ್ತರಾದ ಪುಷ್ಪರಾಜ್ ಬಿ.ಎನ್ ಅವರು, ದಯಾನಂದ್ ಅವರು ಕಳೆದ 10-15 ವರ್ಷಗಳಿಂದ ಪತ್ರಕರ್ತರಾಗಿ, ಕಲಾವಿದರಾಗಿ ಸೇವೆಯನ್ನು ಸಲ್ಲಿಸಿದ್ದಾರೆ. ಇದೀಗ ನಾವು ಅತ್ಮೀಯ ಮಿತ್ರರೊಬ್ಬರನ್ನು ಕಳೆದುಕೊಂಡಿದ್ದೇವೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಹೇಳಿದರು.

ಈ ಸಂದರ್ಭ ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶ್ರೀನಿವಾಸ್ ನಾಯಕ್ ಇಂದಾಜೆ, ಅನ್ನು ಮಂಗಳೂರು ಸೇರಿದಂತೆ ಪತ್ರಕರ್ತರು ಹಾಜರಿದ್ದರು.

Related posts

Leave a Reply

Your email address will not be published. Required fields are marked *