Header Ads
Header Ads
Header Ads
Breaking News

ಪಶುವೈದ್ಯೆಯ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ : ಕೊಟ್ಟಾರಚೌಕಿಯಲ್ಲಿ ಎಬಿವಿಪಿ ನೇತೃತ್ವದಲ್ಲಿ ನಡೆದ ಪ್ರತಿಭಟನೆ

ಹೈದರಾಬಾದ್‌ನಲ್ಲಿ ಪಶುವೈದ್ಯೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಕೊಲೆ ಮಾಡಿದ ಕೃತ್ಯವನ್ನು ಖಂಡಿಸಿ, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕೆಂದು ಒತ್ತಾಯಿಸಿ ಎಬಿವಿಪಿ ನೇತೃತ್ವದಲ್ಲಿ ನಗರದ ಕೊಟ್ಟಾರಚೌಕಿಯಲ್ಲಿ ಪ್ರತಿಭಟನೆ ನಡೆಯಿತು. ಪ್ರಕರಣವನ್ನು ತೀವ್ರವಾಗಿ ಖಂಡಿಸಿದ ಎಬಿವಿಪಿ ಕಾರ್ಯಕರ್ತರು ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕೆಂದು ಸರ್ಕಾರವನ್ನ ಆಗ್ರಹಿಸಿದ್ರು. ಈ ವೇಳೆ ಎಬಿವಿಪಿ ನಗರ ಕಾರ್ಯದರ್ಶಿ ಮಣಿಕಂಠ ಕಳಸ,ವಿಭಾಗ ಸಂಘಟನಾ ಕಾರ್ಯದರ್ಶಿ ಬಸವೇಶ್ ಕೋರಿ, ನಗರ ಸಂಘಟನಾ ಕಾರ್ಯದರ್ಶಿ ವಿರೇಶ್, ಜಿಲ್ಲಾ ಸಂಚಾಲಕ ಸಂದೇಶ್, ಕಾರ್ಯಕರ್ತರಾದ ರೋನಕ್ ಸುವರ್ಣ, ಲಿಖಿತ್ ರಾಜ್,ಚೇತನ್, ಸಂತೋಷ್ ಸೇರಿದಂತೆ ಮತ್ತಿತರರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ರು.

 

Related posts

Leave a Reply

Your email address will not be published. Required fields are marked *