Header Ads
Header Ads
Breaking News

ಪ್ರೇಮಿಯಿಂದ ಯುವತಿಗೆ ಚೂರಿ ಇರಿತ ಪ್ರಕರಣ: ವಿದ್ಯಾರ್ಥಿನಿ ದೀಕ್ಷಾಳ ಆರೋಗ್ಯ ವಿಚಾರಿಸಿದ ಸಚಿವ ಯುಟಿ ಖಾದರ್

ಚೂರಿ ಇರಿತಕ್ಕೊಳಗಾದ ವಿದ್ಯಾರ್ಥಿನಿ ದೀಕ್ಷಾಳ ಆರೋಗ್ಯ ವಿಚಾರಣೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಇಂದು ಬೆಳಿಗ್ಗೆ ದೇರಳಕಟ್ಟೆ ಕೆ.ಎಸ್ ಹೆಗ್ಡೆ ಆಸ್ಪತ್ರೆಗೆ ಭೇಟಿ ನೀಡಿ ನಡೆಸಿದರು. ಹೆತ್ತವರಿಗೆ ಸಮಾಧಾನ ಹೇಳಿದ ಸಚಿವ ಖಾದರ್ ವೈಯಕ್ತಿಕವಾಗಿ ಸಹಾಯಧನವನ್ನು ಮಾಡಿದರು. ಬಳಿಕ ಮಾತನಾಡಿ ಅವರು ದೀಕ್ಷಾ ಆರೋಗ್ಯ ಸ್ಥಿತಿ ಚೇತರಿಸಿಕೊಳ್ಳುತ್ತಿದೆ. ಸಕಾಲಕ್ಕೆ ಆಸ್ಪತ್ರೆ, ವೈದ್ಯರ ತಂಡ ಹಾಗೂ ಪ್ರಮುಖವಾಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನಸ್೯ ನಿಮ್ಮಿ ಹಾಗೂ ಆಂಬ್ಯುಲೆನ್ಸ್ ಚಾಲಕ ಪ್ರವೀಣ್ ಅವರಿಗೆ ಅಭಿನಂದಿಸಿದರು.

ಆಸ್ಪತ್ರೆ ನರ್ಸ್‌ಗೆ ಶೌರ್ಯ ಪ್ರಶಸ್ತಿ ದೊರಕಿಸುವ ಭರವಸೆ ನೀಡಿದರು. ಮಾದಕ ವ್ಯಸನ ಜಿಲ್ಲೆಯಲ್ಲಿ ವ್ಯಾಪಕವಾಗಿದೆ ಅನ್ನುವ ಖೇದವಿದೆ. ನಿಯಂತ್ರಣಕ್ಕೆ ಕ್ರಮ ನಿರಂತರವಾಗಿದ್ದರೂ, ಮುಂದುವರಿಯುತ್ತಲೇ ಇದೆ. ಪೊಲೀಸ್ ಇಲಾಖೆಗೆ ಇನ್ನಷ್ಟು ಒತ್ತಡ ಹಾಕಲಾಗುವುದು. ಇಂತಹ ವ್ಯಸನದಿಂದಲೇ ದೀಕ್ಷಾ ಮೇಲೆ ದಾಳಿಯಾಗಿರುವ ಸಾಧ್ಯತೆ ಇದೆ. ದೇವರ ದಯೆಯಿಂದ ಆಕೆ ಬದುಕಿ ಬರಬೇಕೆಂಬುದು ಎಲ್ಲರ ಆಶಯ. ಆರೋಪಿ ಈಗಾಗಲೇ ಪೊಲೀಸ್ ವಶದಲ್ಲಿದ್ದಾನೆ. ಆತನ ಮೇಲೆ ಕಠಿಣ ಕಾನೂನು ಕ್ರಮ. ಜರಗಿಸುವ ವಿಶ್ವಾಸ ಪೊಲೀಸ್ ಇಲಾಖೆಯಿಂದ ದೊರೆತಿದೆ. ಸಂಸದೆ ಶೋಭಾ , ಆರೋಪಕ್ಕೆ ಪ್ರತ್ಯಾರೋಪ ಮಾಡುವುದಿಲ್ಲ. ಯಾವ ರೀತಿಯಲ್ಲಿ ಕಾರ್ಯನಿರ್ವಹಿಸಬೇಕೆಂಬ ಉತ್ತಮ ಅಂಶಗಳನ್ನು ಹೇಳಿದಲ್ಲಿ ಅದನ್ನು ಸ್ಬೀಕರಿಸುತ್ತೇನೆ. ಅದು ಬಿಟ್ಟು ಸಂಸದೆಯಾಗಿ ಸರಿಯಾಗಿ ಕ್ಷೇತ್ರಕ್ಕೆ ಬಾರದೆ ಕಾರ್ಯನಿರ್ವಹಿಸದವರು ಮೊದಲಿಗೆ ಅವರ ಜವಾಬ್ದಾರಿ ನಿರ್ವಹಿಸಲಿ ಎಂಬುದು ನನ್ನ ಆಶಯ ಎಂದರು. ಈ ಸಂದರ್ಭ ಉಳ್ಳಾಲ ನಗರಸಭೆ ಸದಸ್ಯರಾದ ರವಿಚಂದ್ರ ಗಟ್ಟಿ, ಬಾಝಿಲ್ ಡಿಸೋಜ, ಮುಂತಾದವರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *