Header Ads
Header Ads
Breaking News

ಪಾಲಿಕೆ ಚುನಾವಣೆಯಲ್ಲಿ ಪಕ್ಷಗಳ ನಡುವೆ ಜೋರಾಗಿದೆ ಜಿದ್ದಾಜಿದ್ದಿ : ನಾನಾ ರಾಜಕೀಯ ಪಕ್ಷದ ಅಭ್ಯರ್ಥಿಗಳಿಂದ ಮನೆ- ಮನೆ ಪ್ರಚಾರ

 ಮಂಗಳೂರು ಮಹಾನಗರ ಪಾಲಿಕೆ ಚುನಾವಣೆ ರಾಜಕೀಯ ಪಕ್ಷಗಳ ಆರೋಪ -ಪ್ರತ್ಯಾರೋಪಕ್ಕೆ ವೇದಿಕೆಯಾಗಿದೆ. ಪಕ್ಷಗಳ ಮುಖಂಡರು ಒಂದೊಂದೇ ವಿಚಾರಗಳನ್ನು ಹಿಡಿದುಕೊಂಡು ಆರೋಪ ಪ್ರತ್ಯಾರೋಪದಲ್ಲಿ ತೊಡಗಿಸಿಕೊಂಡಿದ್ದಾರೆ. ಇವೆಲ್ಲದರ ನಡುವೆಯೂ ಮತದಾರರ ಓಲೈಕೆ ಕಾರ್ಯ ಭರದಿಂದ ನಡೆಯುತ್ತಿದೆ.

ದಿನದಿಂದ ದಿನಕ್ಕೆ ರಂಗೇರುತ್ತಿದೆ ಮಂಗಳೂರು ಪಾಲಿಕೆ ಚುನಾವಣೆಯ ಅಖಾಡ….!
ಕೈ- ಕಮಲ ಮುಖಂಡರ ನಡುವೆ ನಡೆಯುತ್ತಿದೆ ಆರೋಪ-ಪ್ರತ್ಯಾರೋಪ
ಪರಸ್ಪರ ವಾಗ್ದಾಳಿಯ ನಡುವೆಯೂ ನಡೆಯುತ್ತಿದೆ ಮನೆ-ಮನೆ ಪ್ರಚಾರ ಕಾರ್ಯ

ಯೆಸ್.. ಮಂಗಳೂರು ಮಹಾನಗರ ಪಾಲಿಕೆಯ ಚುನಾವಣಾ ಅಖಾಡ ರಂಗೇರಿದೆ. ರಾಜಕೀಯ ಪಕ್ಷಗಳು ಬಿರುಸಿನಿಂದ ಪ್ರಚಾರವನ್ನು ಆರಂಭಿಸಿದೆ. ಇತ್ತ ಚುನಾವಣೆಗೆ ಕೌಂಟ್‌ಡೌನ್ ಶುರುವಾಗ್ತಾ ಇದ್ದಂತೆ ಒಬ್ಬರ ಮೇಲೆ ಒಬ್ಬರು ವಾಗ್ದಾಳಿ ನಡೆಸೋದಕ್ಕೆ ಆರಂಭಿಸಿದ್ದಾರೆ. ಕಣಕ್ಕಿಳಿದಿರೋ ಅಭ್ಯರ್ಥಿಗಳಂತೂ ತಮ್ಮ ತಮ್ಮ ಕ್ಷೇತ್ರದಲ್ಲಿ ಜನರ ಮನಗೆಲ್ಲಲು ಶತಾಯಗತಾಯ ಪ್ರಯತ್ನವನ್ನೂ ಮಾಡ್ತಾ ಇದ್ದಾರೆ.
 ಚುನಾವಣೆ ಹತ್ತಿರ ಬರುತ್ತಿದ್ದಂತೆ ಮಾಮೂಲಿ ಎನ್ನುವಂತೆ ಆರೋಪ ಪ್ರತ್ಯಾರೋಪಗಳ ಸುರಿಮಳೆಯಾಗುತ್ತಿದೆ. ನಗರ ವ್ಯಾಪ್ತಿಯಲ್ಲಿ ನೀರಿನ ದರವನ್ನ ಏರಿಕೆ ಮಾಡಿರುವುದಕ್ಕೆ ಕಾಂಗ್ರೆಸ್ ಪಕ್ಷವೇ ಸಂಪೂರ್ಣ ಹೊಣೆ, ಕಾಂಗ್ರೆಸ್ ಆಡಳಿತ ವೈಫಲ್ಯವನ್ನ ಮರೆಮಾಚಲು ಬಿಜೆಪಿ ವಿರುದ್ಧ ಸುಳ್ಳ ಆರೋಪ ಮಾಡುತ್ತಿದೆ ಎಂಬು ಮಾತು ಬಿಜೆಪಿ ನಾಯಕರಿಂದ ಕೇಳಿಬಂದಿದೆ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಈ ಪ್ರಕ್ರಿಯೆ ನಡೆದಿದೆ. ಆಗ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದವರು ಕಾಂಗ್ರೆಸ್ ಶಾಸಕ ಯು.ಟಿ.ಖಾದರ್. ಈ ಅವಧಿಯಲ್ಲಿ ಬಿಜೆಪಿ ಯಾವುದೇ ಅಧಿಕಾರವನ್ನು ನಡೆಸಿಲ್ಲ. ಇದೀಗ ಕಾಂಗ್ರೆಸ್ ಮುಖಂಡರು ಬಿಜೆಪಿ ವಿರುದ್ಧ ಸುಳ್ಳು ಹೇಳುತ್ತಿದ್ದಾರೆ ಎಂದು ಶಾಸಕ ಡಿ.ವೇದವ್ಯಾಸ್ ಕಾಮತ್ ಆರೋಪಿಸಿದ್ದಾರೆ.
ಇನ್ನು ಕಾಂಗ್ರೆಸ್ ಕೂಡ ಇದಕ್ಕೆ ಕೌಂಟರ್ ಕೊಟ್ಟಿದೆ. ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನೀರಿನ ದರ ಏರಿಕೆ ಕುರಿತು ಸರಿಯಾದ ಮಾಹಿತಿ ಇಲ್ಲದ ಶಾಸಕ ಡಿ ವೇದವ್ಯಾಸ್ ಕಾಮತ್ ಅವರು ತಮ್ಮ ವಿಫಲತೆಯನ್ನು ಮರೆಮಾಚಲು ಇತರರ ಮೇಲೆ ಗೂಬೆ ಕೂರಿಸುತ್ತಿದ್ದಾರೆ ಎಂದು ಮಾಜಿ ಸಚಿವ ಯುಟಿ ಖಾದರ್ ಹೇಳಿದ್ರೆ, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಕೂಡ ಕಾಂಗ್ರೆಸ್ ಆಡಳಿತಾವಧಿಯಲ್ಲಿ ನೀರಿನ ದರ ಏರಿಸಿಲ್ಲ, ಪಾಲಿಕೆಯಲ್ಲಿ ಆಡಳಿತಾಧಿಕಾರಿ ಅವಧಿಯಲ್ಲಿ ನೀರಿನ ದರ ಏರಿಕೆ ಆಗಿದೆ ಅನ್ನುವ ಮೂಲಕ ಬಿಜೆಪಿ ನಾಯಕರ ಹೇಳಿಕೆಗೆ ಐವನ್ ಡಿಸೋಜಾ ಟಾಂಗ್ ಕೊಟ್ಟಿದ್ದಾರೆ.
 ಅತ್ತ ನೀರಿನ ವಿಚಾರ ತಣ್ಣಗಾಗ್ತಾ ಇದ್ದಂತೆ ಒಳಚರಂಡಿ ಹಾಗೂ ತ್ಯಾಜ್ಯ ಸಮಸ್ಯೆ ಸದ್ದು ಮಾಡಿದೆ. ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 22 ವಾರ್ಡ್‌ಗಳಲ್ಲಿ ಒಳಚರಂಡಿ ಅವ್ಯವಸ್ಥೆ ಹಾಗೂ ಪಚ್ಚನಾಡಿಯ ತ್ಯಾಜ್ಯ ಕುಸಿತಕ್ಕೆ ಕಾಂಗ್ರೆಸ್ ಆಡಳಿತವೇ ನೇರ ಕಾರಣ. ಪಚ್ಚನಾಡಿಯಲ್ಲಿ ತ್ಯಾಜ್ಯ ಕುಸಿತ ತಡೆಯುವಲ್ಲಿ ಕಾಂಗ್ರೆಸ್ ಆಡಳಿತ ಸಂಪೂರ್ಣ ವಿಫಲವಾಗಿದೆ ಅಂತಾ ಶಾಸಕ ಡಾ|ವೈ.ಭರತ್ ಶೆಟ್ಟಿ ಆರೋಪಿಸಿದ್ರು.
ಮಂಗಳೂರು ಮಹಾನಗರ ಪಾಲಿಕೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜಕೀಯ ಪಕ್ಷಗಳು ಆರೋಪ ಪ್ರತ್ಯಾರೋಪಗಳ ಕೆಸರೆರಚಾಟದಲ್ಲಿ ತೊಡಗಿಕೊಂಡಿದೆ. ಮುಂದಿನ ದಿನಗಳಲ್ಲಿ ಮತದಾರರು ಯಾವ ರೀತಿಯಲ್ಲಿ ಅಭ್ಯರ್ಥಿಗಳಿಗೆ ಆರ್ಶೀವಾದ ಮಾಡಲಿದ್ದಾರೆ ಅನ್ನೋದನ್ನ ಕಾದು ನೋಡಬೇಕಾಗಿದೆ.

Related posts

Leave a Reply

Your email address will not be published. Required fields are marked *