Header Ads
Header Ads
Breaking News

ಪುತ್ತೂರು : ಅಂಗಡಿಗೆ ನುಗ್ಗಿ ದಾಂಧಲೆ, ಹಲ್ಲೆ ಪ್ರಕರಣ,ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಪುತ್ತೂರು : ಕ್ಯಾಸೆಟ್ ಮಾರಾಟದ ಅಂಗಡಿಗೆ ನುಗ್ಗಿ, ಗಲಾಟೆ ಮಾಡಿ,ಕೈಯಿಂದ ಹೊಡೆದು ಹಲ್ಲೆ ನಡೆಸಿ, ಚೂರಿ ತೋರಿಸಿ ಜೀವ ಬೆದರಿಕೆಯೊಡ್ಡಿದ್ದ ೧೫ ವರ್ಷದ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿ ತಲೆ ಮರೆಸಿಕೊಂಡಿದ್ದ ಎರಡನೇ ಆರೋಪಿಯೊಬ್ಬನನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ. 

ಪುತ್ತೂರು ನಗರದ ಹೊರವಲಯದ ಚಿಕ್ಕಮುಡ್ನೂರು ಗ್ರಾಮದ ತಾರಿಗುಡ್ಡೆ ನಿವಾಸಿ ಅಬ್ದುಲ್ ಖಾಸಿಂ ಅವರ ಪುತ್ರ ಮೊಹಮ್ಮದ್ ಕಮಲ್ ಬಂಧಿತ ಆರೋಪಿ.

ಈ ಪ್ರಕರಣದ ಎರಡನೇ ಆರೋಪಿಯಾಗಿದ್ದ ಮೊಹಮ್ಮದ್ ಕಮಲ್ ವಿದೇಶಕ್ಕೆ ತೆರಳಿ ತಲೆಮರೆಸಿಕೊಂಡಿದ್ದ. ಉಳಿದ ಮೂವರ ಪ್ರಕರಣ ಮುಕ್ತಾಯಗೊಂಡಿತ್ತು. ಕಳೆದ ೧೫ ವರ್ಷಗಳಿಂದ ವಿದೇಶವಾದ ದಮಮ್‌ಗೆ ತೆರಳಿ ತಲೆಮರೆಸಿಕೊಂಡಿದ್ದ ಮೊಹಮ್ಮದ್ ಕಮಲ್ ಊರಿಗೆ ಬಂದು ಹೋಗುತ್ತಿದ್ದ ಮಾಹಿತಿಯನ್ನು ಕಲೆಹಾಕಿದ ಪುತ್ತೂರು ನಗರ ಪೊಲೀಸರು ಮೊಹಮ್ಮದ್ ಕಮಲ್ ದಮಮ್‌ನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದು ಇಳಿದ ಸಮಯದಲ್ಲಿ ಪುತ್ತೂರು ನಗರ ಠಾಣೆಯ ಇನ್ಸ್‌ಪೆಕ್ಟರ್ ತಿಮ್ಮಪ್ಪ ನಾಯ್ಕ ಅವರ ನಿರ್ದೇಶನದಲ್ಲಿ ಹೆಡ್ ಕಾನ್‌ಸ್ಟೇಬಲ್‌ಗಳಾದ ಪರಮೇಶ್ವರ್ ಮತ್ತು ರಾಧಾಕೃಷ್ಣ ಅವರು ಕಾರ್ಯಾಚರಣೆ ನಡೆಸಿ ಆತನನ್ನು ಬಂಧಿಸಿದ್ದಾರೆ.

Related posts

Leave a Reply