Header Ads
Breaking News

ಪೊಲೀಸರ ನೈತಿಕತೆ ಪ್ರಶ್ನಿಸಿರುವ ಎಚ್ಡಿಕೆ ಮಂಪರು ಪರೀಕ್ಷೆ ನಡೆಸಿ : ಸಂಜೀವ ಮಠಂದೂರು ಒತ್ತಾಯ

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆಗೆ ಸಂಬಂಧಿಸಿದಂತೆ ಪೊಲೀಸರ ನೈತಿಕತೆ ಪ್ರಶ್ನಿಸಿರುವ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರ ಮಂಪರು ಪರೀಕ್ಷೆ ನಡೆಸಬೇಕು, ಇಲ್ಲವೇ ನಿಮ್ಹಾನ್ಸ್‌ಗೆ ದಾಖಲಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ, ಶಾಸಕ ಸಂಜೀವ ಮಠಂದೂರು ಹೇಳಿದ್ದಾರೆ.ಈ ಕುರಿತು ಮಂಗಳೂರಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪೊಲೀಸರು ಸಂಭಾವ್ಯ ಬಹುದೊಡ್ಡ ದುರಂತವನ್ನು ತಪ್ಪಿಸಿದ್ದಾರೆ. ಅವರನ್ನು ಅಭಿನಂದಿಸುವುದು ನಮ್ಮ ಕರ್ತವ್ಯ. ಆದರೆ, ಕುಮಾರಸ್ವಾಮಿ ಪೊಲೀಸರ ಮೇಲೆ ಸಂಶಯ ವ್ಯಕ್ತಪಡಿಸಿದ್ದಾರೆ. ಮಂಗಳೂರು ಗೋಲಿಬಾರ್ ಸಂದರ್ಭದಲ್ಲೂ ಅವರು ಸಿಡಿ ಬಿಡುಗಡೆ ಮಾಡಿ ಗೊಂದಲ ಸೃಷ್ಟಿ ಮಾಡಿದ್ದರು. ಸಮಾಜಘಾತಕ ಶಕ್ತಿಗಳಿಗೆ ಅವರು ಬೆಂಬಲ ನೀಡುತ್ತಿದ್ದಾರೆ ಎಂದರು.

Related posts

Leave a Reply

Your email address will not be published. Required fields are marked *