Header Ads
Breaking News

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ಹಿನ್ನೆಲೆ ಕೇಂದ್ರ ಸರ್ಕಾರ ಕೂಡಲೇ ಸ್ಪಷ್ಟನೆ ನೀಡಲಿ; ಯು.ಟಿ. ಖಾದರ್

ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ದೇಶದಲ್ಲಿ ಈಗ ಗೊಂದಲ ಸೃಷ್ಟಿಯಾಗಿದೆ ಕೇಂದ್ರ ಸರ್ಕಾರ ಕೂಡಲೇ ಸ್ಪಷ್ಟನೆ ನೀಡಲಿ ಪ್ರತಿ ರಾಜ್ಯದಲ್ಲಿ ಸಿಎಂ, ಗೃಹಸಚಿವರು ಗೊಂದಲ ನಿವಾರಿಸಲಿ ಎಂದು ಶಾಸಕ ಯು.ಟಿ. ಖಾದರ್ ಹೇಳಿದರು. ಅವರು ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಮುಖ್ಯಮಂತ್ರಿಗಳು ರಾಜ್ಯದ ಜನರಲ್ಲಿ ವಿಶ್ವಾಸ ಮೂಡಿಸುವ ಕೆಲಸ ಮಾಡಲಿ.
ಮನೆ ಮನೆಯಲ್ಲಿ ಆಶಾ ಕಾರ್ಯಕರ್ತೆಯರು ಹೋದಾಗ ಗೊಂದಲ ಸೃಷ್ಟಿಯಾಗುತ್ತಿದೆ. ಜನರಲ್ಲಿ ಪೌರತ್ವ ಕಾಯ್ದೆ ಕುರಿತು ಗೊಂದಲ ಸೃಷ್ಟಿಯಾಗಿದೆ. ಸರ್ಕಾರ, ಆಡಳಿತ ಮಂಡಳಿಗಳು, ಪತ್ರಕರ್ತರು ಅರಿವು ಮೂಡಿಸಬೇಕಾಗಿದೆ. ಗ್ರಾಮ ಪಂಚಾಯತ್ ಮಟ್ಟದಲ್ಲೇ ಈ ಜಾಗೃತಿ ನಡೆಯಬೇಕಾಗಿದೆ ಎಂದು ಹೇಳಿದರು.

Related posts

Leave a Reply

Your email address will not be published. Required fields are marked *