Header Ads
Header Ads
Breaking News

“ಪ್ರಧಾನಿಯವರೇ..ಭೂತಾನ್ ಮಕ್ಕಳ ಬೆನ್ನು ತಟ್ಟಬೇಡಿ” ಮಾಜಿ ಸಚಿವ ರಮಾನಾಥ ರೈ ವಾಗ್ದಾಳಿ

ಭೀಕರ ಪ್ರವಾಹ ಬಂದು ಜನರೆಲ್ಲರೂ ಸಂಕಷ್ಟಕ್ಕೆ ಸಿಲುಕಿರುವ ಹೊತ್ತಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಭೂತಾನ್ ಪ್ರವಾಸ ಕೈಗೊಂಡಿದ್ದಾರೆ. ಭೂತಾನ್ ಮಕ್ಕಳಿಗೆ ಬೆನ್ನು ತಟ್ಟುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ದೇಶದ ಪ್ರವಾಹಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸಂತ್ರಸ್ತ ಕಣ್ಣೀರೊರೆಸುವ ಕೆಲಸ ಮಾಡಬೇಕಿತ್ತು. ನಿಜವಾಗಿಯೂ ಕೇಂದ್ರ ಸರ್ಕಾರಕ್ಕೆ ನೆರೆ ಸಂತ್ರಸ್ತ ಬಗ್ಗೆ ಕಾಳಜಿ ಇಲ್ಲ ಎಂದು ಮಾಜಿ ಸಚಿವ ಬಿ ರಮಾನಾಥ್ ರೈ ವಾಗ್ದಾಳಿ ನಡೆಸಿದ್ದಾರೆ. 

ಕುಂದಾಪುರ ತಾಲೂಕಿನಲ್ಲಿ ನೆರೆಯಿಂದುಂಟಾದ ಹಾನಿಯ ಬಗ್ಗೆ ಕುಂದಾಪುರ ಹಾಗೂ ಕೋಟ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ವರದಿ ಸ್ವೀಕರಿಸಿದ ಬಳಿಕ ಕುಂದಾಪುರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಈ ಸಂದರ್ಭ ರಾಜ್ಯ ಹಿಂದುಳಿದ ಮೋರ್ಚಾ ಉಪಾಧ್ಯಕ್ಷ ಮಾಣಿಗೋಪಾಲ್ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ, ಕೋಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆನಂದ ಕುಂದರ್, ಕೊಳ್ಕಿಬೈಲ್ ಕಿಶನ್ ಹೆಗ್ಡೆ, ದೇವಾನಂದ ಶೆಟ್ಟಿ, ಮಲ್ಯಾಡಿ ಶಿವರಾಮ್ ಶೆಟ್ಟಿ ಮೊದಲಾದವರು ಇದ್ದರು.

Related posts

Leave a Reply

Your email address will not be published. Required fields are marked *