

ಉಜಿರೆ: ಉಜಿರೆ ಶ್ರೀ ಧ.ಮ. ಕಾಲೇಜಿನ ಆಶ್ರಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ -2020 ಅನುಷ್ಠಾನದ ಸವಾಲುಗಳ ಕುರಿತು ಫೆ.12ರಂದು ಸಿದ್ಧವನ ಗುರುಕುಲದಲ್ಲಿ ಶುಕ್ರವಾರ ಒಂದು ದಿನದ ವಿಚಾರ ಸಂಕಿರಣ ನಡೆಯಲಿದೆ.
ಶ್ರೀ ಧ.ಮ.ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಬಿ.ಯಶೋವರ್ಮ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಮಂಗಳೂರಿನ ಸೇಂಟ್ ಅಲೋಷಿಯಸ್ ಕಾಲೇಜಿನ ವಿಶ್ರಾಂತ ಕುಲಸಚಿವ ಪ್ರೊ.ಎ.ಎಂ.ನರಹರಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕಾಲೇಜಿನ ಪ್ರಾಂಶುಪಾಲ ಡಾ.ಸತೀಶ್ಚಂದ್ರ ಎಸ್. ಅಧ್ಯಕ್ಷತೆ ವಹಿಸುವರು.ಪ್ರೊ.ಎ.ಎಂ.ನರಹರಿ ಅವರ ‘ಶಿಕ್ಷಣ ಮನ್ವಂತರ’ ಪುಸ್ತಕ ಆಧರಿಸಿ ನಡೆಯಲಿರುವ ಈ ವಿಚಾರ ಸಂಕಿರಣದಲ್ಲಿ ವಿವಿಧ ವಿಚಾರಗಳು ಮಂಡನೆಯಾಗಲಿವೆ. ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ.ಚಿನ್ನಪ್ಪಗೌಡ, ಮಂಗಳೂರು ವಿಶ್ವವಿದ್ಯಾಲಯದ ನೆಹರೂ ಚಿಂತನ ಕೇಂದ್ರದ ನಿರ್ದೇಶಕ ಪ್ರೊ.ರಾಜಾರಾಂ ತೋಳ್ಪಾಡಿ, ಮುಂಡಾಜೆ ಮೊರಾರ್ಜಿ ವಸತಿ ಶಾಲೆಯ ಅರವಿಂದ ಚೊಕ್ಕಾಡಿ ಹಾಗೂ ಬೆಳಾಲು ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ರಾಮಕೃಷ್ಣ ಭಟ್ ಅವರು ವಿಚಾರ ಪ್ರಸ್ತುತಪಡಿಸಲಿದ್ದಾರೆ ಎಂದು ಸಂಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.