
ಬಂಟ್ವಾಳ : ಸಂಪೂರ್ಣ ಶಿಲಾಮಯವಾಗಿ ಪುನರ್ ನಿರ್ಮಾಣಗೊಳ್ಳುತ್ತಿರುವ ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಪದವು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಫೆ.19ರಿಂದ ನಡೆಯಲಿರುವ ಬ್ರಹ್ಮಕಲಶೋತ್ಸವದ ಪ್ರಯುಕ್ತ ಶುಕ್ರವಾರ ಚಪ್ಪರ ಮುಹೂರ್ತ ಕಾರ್ಯಕ್ರಮ ನಡೆಯಿತು.
ಕ್ಷೇತ್ರದ ತಂತ್ರಿ ಶ್ರೀಪಾದ ಪಾಂಗಣ್ಣಾಯ ಅವರು ಅರ್ಚಕ ಅನಂತ ಮಹಿಮ ಅವರ ಸಹಕಾರದಲ್ಲಿ ವಿವಿಧ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದರು. ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ, ಬಂಟ್ವಾಳ ಶಾಸಕ ರಾಜೇಶ್ ನಾಕ್ ಉಳಿಪ್ಪಾಡಿಗುತ್ತು, ಆಡಳಿತಾಧಿಕಾರಿ, ಚೆನ್ನೈತ್ತೋಡಿ ಗ್ರಾ.ಪಂ. ಪಿಡಿಒ ಯಮುನಪ್ಪ, ಅಧ್ಯಕ್ಷ ಜಯಪ್ರಕಾಶ್ ಶೆಟ್ಟಿ ಬುಳೇರಿ, ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷರಾದ ಭೊಜರಾಜ ಶೆಟ್ಟಿ ಕೊರಗಟ್ಟೆ, ಬಾಬು ಪೂಜಾರಿ ಕೌಡಾಡಿ, ಅಧ್ಯಕ್ಷ ವಸಂತ ಶೆಟ್ಟಿ ಕೇದಗೆ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಉದಯ ಕುಮಾರ್ ಶೆಟ್ಟಿ ಕುಂಡೋಳಿಗುತ್ತು, ಪ್ರಮುಖರಾದ ಶ್ರೀನಿವಾಸ ಪ್ರಭು ಆಲದಪದವು, ಜಿ.ಕೆ.ಭಟ್, ಸುಲೋಚನಾ ಜಿ.ಕೆ.ಭಟ್, ಟಿ. ವರದರಾಜ ಪೈ, ಶ್ಯಾಂ ಪ್ರಸಾದ್ ಪೂಂಜ,ಗಣನಾಥ ಶೆಟ್ಟಿ , ಶ್ರೀಧರ ಪೈ, ಪ್ರಭಾಕರ ಶೆಟ್ಟಿ, ದಿನೇಶ್ ಶೆಟ್ಟಿ ದಂಬೆದಾರ್, ಉಮೇಶ್ ಶೆಟ್ಟಿ, ರಮೇಶ್ ಶೆಟ್ಟಿ, ಚಂದ್ರಶೇಖರ ಶೆಟ್ಟಿ ವಾಮದಪದವು, ಪ್ರಕಾಶ್ ರಾವ್ ನಯನಾಡು, ಪ್ರದೀಪ್ ಶೆಟ್ಟಿ, ಮೋಹನ್ ಸಾಲ್ಯಾನ್, ಪ್ರಕಾಶ್ ಪೂಜಾರಿ, ಪುರುಷೋತ್ತಮ ಶೆಟ್ಟಿ, ಚಂದ್ರಶೇಖರ ಶೆಟ್ಟಿ ಪಡಂತರಕೋಡಿ,ದೇವಿಪ್ರಸಾದ್ ಶೆಟ್ಟಿ ಹಾಗೂ ಜೀರ್ಣೋದ್ಧಾರ ಸಮಿತಿ, ಬ್ರಹ್ಮ ಕಲಶೋತ್ಸವ ಸಮಿತಿ, ನಿಕಟಪೂರ್ವ ವ್ಯವಸ್ಥಾಪನ ಸಮಿತಿ, ವಿವಿಧ ಗ್ರಾಮ ಸಮಿತಿ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ದೇವಸ್ಥಾನಕ್ಕೆ ಸಂಬಂಧಿಸಿ ಅಭಿವೃದ್ಧಿ ಕಾರ್ಯಗಳ ಬಗ್ಗೆ ದೇವಸ್ಥಾನದ ವತಿಯಿಂದ ಶಾಸಕರಿಗೆ ಮನವಿ ಸಲ್ಲಿಸಲಾಯಿತು. ಇದಕ್ಕೆ ತತ್ಕ್ಷಣ ಸ್ಪಂದಿಸಿದ ಶಾಸಕರು ರಸ್ತೆ, ಕೆರೆ, ದಾರಿದೀಪ, ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವುದಾಗಿ ಭರವಸೆ ನೀಡಿ, ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.