
ಉಳ್ಳಾಲ : ಉಳ್ಳಾಲದ ” ಬ್ರಹ್ಮಶ್ರೀ ಬಿಲ್ಲವ ವೇದಿಕೆ”ಯ ವತಿಯಿಂದ ವಷರ್ಂಪ್ರತಿ ಕೊಡಲಾಗುವ ಪ್ರತಿಷ್ಠಿತ “ಬ್ರಹ್ಮಶ್ರೀ” ಪ್ರಶಸ್ತಿಯನ್ನು ಈ ಬಾರಿ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಫೆ.28ರಂದು ತೊಕ್ಕೊಟ್ಟು ಅಂಬಿಕಾರೋಡಿನ ಗಟ್ಟಿ ಸಮಾಜ ಭವನದಲ್ಲಿ ತೊಕ್ಕೊಟ್ಟಿನ ಬ್ರಹ್ಮಶ್ರೀ ಬಿಲ್ಲವ ವೇದಿಕೆಯ ಆಶ್ರಯದಲ್ಲಿ ನಡೆಯುವ “ಮೆರುಗು” ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುವುದು ಎಂದು ವೇದಿಕೆಯ ಅಧ್ಯಕ್ಷ ಕೆ.ಟಿ. ಸುವರ್ಣ ಹೇಳಿದರು.
ಅವರು ತೊಕ್ಕೊಟ್ಟಿನ ಬ್ರಹ್ಮಶ್ರೀ ಬಿಲ್ಲವ ವೇದಿಕೆಯ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ್ರು. ಫೆ. 28ರಂದು ಬೆಳಗ್ಗೆ ತೊಕ್ಕೊಟ್ಟು ಅಂಬಿಕಾರೋಡಿನ ಗಟ್ಟಿ ಸಮಾಜ ಭವನದಲ್ಲಿ ” ಮೆರುಗು 2021″ ಪ್ರತಿಭಾ ಅನಾವರಣದ ಹೊಸ್ತಿಲು ಕಾರ್ಯಕ್ರಮದಲ್ಲಿ ನೃತ್ಯ ಸ್ಫರ್ಧೆ, ಆಯುಷ್ಮಾನ್ ಕಾರ್ಡ್ ಮತ್ತು ಶೈಕ್ಷಣಿಕ ಶಾಲಾ ಶುಲ್ಕ ವಿತರಣೆ ಕಾರ್ಯಕ್ರಮ ನಡೆಯಲಿದೆ. ಇದೇ ವೇಳೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ತಳಮಟ್ಟದ ಕಾರ್ಯಕರ್ತನಾಗಿ ಇಂದು ಉನ್ನತ ಸಾಧನೆಗೈದಿರುವ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಈ ಸಾಲಿನ ಪ್ರತಿಷ್ಠಿತ ” ಬ್ರಹ್ಮಶ್ರೀ” ಪ್ರಶಸ್ತಿ ಪ್ರದಾನ ಮಾಡಲಿದ್ದೇವೆ ಎಂದರು.
ಈ ವೇಳೆ ವೇದಿಕೆಯ ಪ್ರಧಾನ ಕಾರ್ಯದರ್ಶಿ ಜೀವನ್ ಕುಮಾರ್ ತೊಕ್ಕೊಟ್ಟು, ವೇದಿಕೆಯ ಕಾರ್ಯಾಧ್ಯಕ್ಷ ಸತೀಶ್ ಕರ್ಕೇರ, ಕೋಶಾಧಿಕಾರಿ ಲಕ್ಷ್ಮಣ್ ಪೂಜಾರಿ, ದತ್ತು ಸಂಚಾಲಕ ಆನಂದ ಕೆ. ಅಸೈಗೋಳಿ, ಮತ್ತಿತರರು ಉಪಸ್ಥಿತರಿದ್ದರು.