Header Ads
Breaking News

ಬಂಟ್ವಾಳದಲ್ಲಿ ಕಾರ್ಮಿಕ ಸಂಘಟನೆಗಳಿಂದ ಪ್ರತಿಭಟನೆ

ಬಂಟ್ವಾಳ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆ ನೇತೃತ್ವದಲ್ಲಿ ದೇಶವ್ಯಾಪಿ ನಡೆಯುವ ಪ್ರತಿಭಟನೆಯ ಅಂಗವಾಗಿ ಬಂಟ್ವಾಳ ತಾಲೂಕು ಸಮಿತಿ ಆಶ್ರಯದಲ್ಲಿ ಹಕ್ಕೊತ್ತಾಯ ಪ್ರದರ್ಶನ ಬಿ.ಸಿ.ರೋಡಿನ ಮಿನಿ ವಿಧಾನ ಸೌಧದ ಮುಂಭಾಗ ನಡೆಯಿತು.

ಈ ಸಂದರ್ಭ ಎಐಟಿಯುಸಿ ಜಿಲ್ಲಾ ಉಪಾಧ್ಯಕ್ಷ ಬಿ.ಶೇಖರ್ ಪ್ರತಿಭಟನಕಾರರನ್ನು ಉದ್ದೇಶಿಸಿ ಮಾತನಾಡಿ ಪ್ರಧಾನಿ ನರೇಂದ್ರ ಮೋದಿವರು ಕೊರೊನಾ ಜೊತೆ ಬದುಕುವಂತೆ ಹೇಳುತ್ತಾರೆ.ಆದರೆ ಪ್ರಸ್ತುತ ದಿನದಲ್ಲಿ ಪೆಟ್ರೋಲ್, ಡಿಸೇಲ್ ಸಹಿತ ದಿನಬಳಕೆಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಜನರಿಗೆ ಉದ್ಯೋಗವಿಲ್ಲ, ಉದ್ಯೋಗವಿದ್ದವರಿಗೆ ವೇತನವಿಲ್ಲ ಇಂತಹ ಪರಿಸ್ಥಿತಿಯಲ್ಲಿ ಬದುಕಾದಾರೂ ಹೇಗೆ ಎಂದು ಪ್ರಶ್ನಿಸಿದರು. ಸರಕಾರ ಕಾರ್ಮಿಕ ವರ್ಗದ ಹಾಗೂ ಜನಸಾಮಾನ್ಯರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ ಬದಲು ಶ್ರೀಮಂತರಿಗೆ ಸಹಾಯ ಹಸ್ತ ಚಾಚುತ್ತಾ ಬಡಜನ ಮತ್ತು ಕಾರ್ಮಿಕರನ್ನು ಬೀದಿಪಾಲು ಮಾಡಲು ಈ ಸಂದರ್ಭವನ್ನು ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದರು.ಬಳಿಕ ವಿವಿಧ ಬೇಡಿಕೆಗಳ ಮನವಿಯನ್ನು ತಹಶೀಲ್ದಾರ್ ಮೂಲಕ ಸರಕಾರಕ್ಕೆ ಸಲ್ಲಿಸಲಾಯಿತು. ಈ ಸಂದರ್ಭ ಸಿಐಟಿಯು ಜಿಲ್ಲಾ ಜೊತೆ ಕಾರ್ಯದರ್ಶಿ ರಾಮಣ್ಣ ವಿಟ್ಲ, ಎಐಟಿಯುಸಿ ಜಿಲ್ಲಾ ಕಾರ್ಯದರ್ಶಿ ಸುರೇಶ್ ಕುಮಾರ್ ಬಂಟ್ವಾಳ, ಸಮನ ಮನಸ್ಕ ಸಂಘಟನೆಯ ಅಧ್ಯಕ್ಷ ಪ್ರಭಾಕರ ದೈವಗುಡ್ಡೆ ಮತ್ತಿತ್ತರ ಪ್ರಮುಖರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *