Header Ads
Breaking News

ಬಂಟ್ವಾಳದ ಶ್ರೀ ಸುಬ್ರಾಯ ನಾವೂರೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆದ ಬ್ರಹ್ಮಕಲಶಾಭಿಷೇಕ

ಬಂಟ್ವಾಳ: ನಾವೂರು ಗ್ರಾಮದ ಶ್ರೀ ಸುಬ್ರಾಯ ನಾವೂರೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಭಾನುವಾರ ಬೆಳಿಗ್ಗೆ ಅಪಾರ ಸಂಖ್ಯೆಯ ಭಕ್ತರ ಸಮ್ಮುಖದಲ್ಲಿ ಶ್ರೀ ದೇವರಿಗೆ ಬ್ರಹ್ಮಕಲಶಾಭಿಷೇಕ ನೆರವೇರಿತು.ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳು ಹಾಗೂ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ನಡ್ವಂತ್ತಾಡಿ ಶ್ರೀಪಾದ ಪಾಂಗಣ್ಣಾಯ ಅವರ ನೇತೃತ್ವದಲ್ಲಿ ಪುರೋಹಿತ ಬಳಗದ ವೇದಘೋಷಗಳ ಉದ್ಘಾರದೊಂದಿಗೆ, ವೈದಿಕ ಹಾಗೂ ಧಾರ್ಮಿಕ ವಿಧಿ ವಿಧಾನಗಳ ಮೂಲಕ ಕಲಶಾಭಿಷೇಕ ನಡೆಯಿತು. ಬಳಿಕ ವಿವಿಧ ಭಜನಾ ಮಂಡಳಿಗಳಿಂದ ಭಜನೆ ನಡೆಯಿತು. ಎಂದಿಗಿಂತಲೂ ಅಧಿಕ ಸಂಖ್ಯೆಯಲ್ಲಿ ಭಕ್ತ ಸಾಗರ ಕ್ಷೇತ್ರಕ್ಕೆ ಹರಿದು ಬಂದಿತ್ತು.

ಶನಿವಾರ ಸಂಜೆ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವಿರೇಂದ್ರ ಹೆಗ್ಗಡೆ ಮಾತನಾಡಿ ಭಕ್ತಿ ಹಾಗೂ ಏಕಾಗ್ರತೆಯಿಂದ ಭಗವಂತನ ಸೇವೆ ಮಾಡಬೇಕು, ದೇವರ ಅಸ್ಥಿತ್ವವನ್ನು ನಮ್ಮ ಭಕ್ತಿಯಿಂದ ಕಾಣಬೇಕು ಎಂದು ಹೇಳಿದರು.ನಾವೂರು ಶ್ರೀ ಸುಬ್ರಾಯ ನಾವೂರೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಅಂಗವಾಗಿ ಶನಿವಾರ ಸಂಜೆ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ದೇವರ ಮೇಲೆ ನಂಬಿಕೆ ಬಹಳ ಮುಖ್ಯ.ಭಾವ ಇಲ್ಲದೆ ಮಾಡಿದ ಭಕ್ತಿ ಯಾಂತ್ರಿಕವಾಗಿರುತ್ತದೆ ಎಂದು ತಿಳಿಸಿದರು. ಪರಿವರ್ತನೆ ಕಾಲಘಟದಲ್ಲಿ ಜನರು ಬಡತನ ರೇಖೆಗಿಂತ ಉನ್ನತ ಹಂತಕ್ಕೆ ಹೆಜ್ಜೆಯಿಡುತ್ತಿದ್ದಾರೆ. ಸರಕಾರ ಉತ್ತಮ ಜೀವನಕ್ಕಾಗಿ ಹಲವಾರು ಅವಕಾಶವನ್ನು ಮಾಡಿಕೊಟ್ಟಿದೆ. ಈ ಅವಕಾಶವನ್ನು ಸದ್ವಿನಿಯೋಗ ಮಾಡಿಕೊಂಡವರು ಉತ್ತಮ ಭವಿಷ್ಯ ಕಂಡು ಕೊಂಡಿದ್ದಾರೆ ಎಂದರು.

ಧ.ಗ್ರಾ. ಯೋಜನೆಯ ಸ್ವಸಹಾಯ ಸಂಘದ ಮೂಲಕ ಗ್ರಾಮೀಣ ಜನರು ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ. ನಮ್ಮ ಯೋಚನೆ ಕಾರ್ಯಗತಗೊಳ್ಳಲು ಗ್ರಾಮಾಭಿವೃದ್ದಿ ಯೋಜನೆ ಸಹಕಾರಿಯಾಗಿದೆ ಎಂದರು.ಪ್ರಧಾನ ಅರ್ಚಕ ವೆಂಕಟದಾಸ ಭಟ್, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಧ್ಯಕ್ಷ ಮುರಳೀಧರ ಭಟ್, ಗೌರವ ಸಲಹೆಗಾರ ಹರೀಶ್ಚಂದ್ರ ಭಟ್ ಅವರನ್ನು ಸನ್ಮಾನಿಸಲಾಯಿತು. ಶಾಸಕ ರಾಜೇಶ್ ನಾಯ್ಕ್ ಅಧ್ಯಕ್ಷತೆ ವಹಿಸಿದ್ದರು.ಮಾಜಿ ಸಚಿವ ಬಿ. ರಮಾನಾಥ ರೈ ಜಿಲ್ಲಾ ಪಂಚಾಯಿತಿ ಸದಸ್ಯ ಪದ್ಮಶೇಖರ ಜೈನ್, ಶ್ರೀ ದುರ್ಗಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಪ್ರಕಾಶ್ ಅಂಚನ್, ವಸಂತ್ ಭಟ್ ನಾರವಿ, ಕೆ.ಕೆ. ಶೆಟ್ಟಿ ಅಹ್ಮದ್ ನಗರ, ತಾಲೂಕು ಗಾಣಿಗ ಸಮಾಜ ಸಂಘದ ಅಧ್ಯಕ್ಷ ರಘು ಸಪಲ್ಯ ಪ್ರಧಾನ ಅರ್ಚಕ ವೆಂಕಟದಾಸ್ ಭಟ್ ಅಗ್ರಹಾರ್, ಸಲಹೆಗಾರ ಹರಿಶ್ಚಂದ್ರ ಭಟ್, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಧ್ಯಕ್ಷ ಮುರಳೀಧರ ಭಟ್, ಸಮಿತಿಯ ಗೌರವಾಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಆಡಳಿತ ಮೋಕ್ತೇಸರ ರಾಮಚಂದ್ರ ಭಟ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *