Header Ads
Breaking News

ಬಂಟ್ವಾಳ ಅಜ್ಜಿಬೆಟ್ಟು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುಜ್ಞಾ ಕಲಶಾಭಿಷೇಕ, ಬಾಲಾಲಯ ಪ್ರತಿಷ್ಠೆ

ಬಂಟ್ವಾಳ: ಶ್ರದ್ಧಾ ಭಕ್ತಿಯಿಂದ ದೇವರ ಸೇವೆ ನಡೆಸಿದಾಗ ದೇವರ ಅನುಗ್ರಹವಾಗುವುದು. ಗ್ರಾಮದ ದೇವಸ್ಥಾನವನ್ನು ಸಮೃದ್ಧಿಗೊಳಿಸುವುದರಿಂದ ಗ್ರಾಮ ಸಮೃದ್ಧಿಯಾಗುವುದು. ನಿತ್ಯ ಪೂಜೆ ಸಲ್ಲಿಸುವುದರಿಂದ ಗ್ರಾಮ ಸುಭಿಕ್ಷೆಯಾಗುವುದು ಎಂದು ಉಡುಪಿ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರು ಹೇಳಿದರು.

ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಪದವು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ಬುಧವಾರ ನಡೆದ ಅನುಜ್ಞಾ ಕಲಶಾಭಿಷೇಕ, ಬಾಲಾಲಯ ಪ್ರತಿಷ್ಠೆ, ಹಾಗೂ ಪವಿತ್ರ ಮುಷ್ಠಿ ಕಾಣಿಕೆ ಸಮರ್ಪಣೆ ಕಾರ್ಯಕ್ರಮದ ಧಾರ್ಮಿಕ ಸಭೆಯನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು. ದೇವಸ್ಥಾನ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಳ್ಳುವುದು ಯೋಗ ಭಾಗ್ಯ. ಇದನ್ನು ಸದುಪಯೋಗಪಡಿಸಿಕೊಂಡು ದೇವರ ಅನುಗ್ರಹ ಪಡೆಯಬೇಕು ಎಂದು ಹೇಳಿದರು.

ಶ್ರೀ ಕ್ಷೇತ್ರ ಕಟೀಲಿನ ಆನುವಂಶಿಕ ಅರ್ಚಕ ಕೆ.ಲಕ್ಷ್ಮೀ ನಾರಾಯಣ ಆಸ್ರಣ್ಣ ಅವರು ಆಶೀರ್ವಚನ ನೀಡಿ ಮಾತನಾಡಿ, ಭಕ್ತರು ಪ್ರೀತಿ, ಭಕ್ತಿ, ನೀತಿಯಿಂದ ನನ್ನ ದೇವಸ್ಥಾನ ಎಂದು ಭಾವಿಸಿ ತೊಡಗಿಸಿಕೊಂಡಾಗ ದೇವರ ಸಾನ್ನಿಧ್ಯ ಉಂಟಾಗುವುದು. ನಾವು ನಂಬಿದ ದೆವರ ಸಾನ್ನಿಧ್ಯದಲ್ಲಿ ಪ್ರಾರ್ಥಿಸಿಕೊಂಡಾಗ ಶಾಂತಿ ನೆಮ್ಮದಿ ದೊರಕುವುದು ಎಂದರು.

ಮೂಡುಬಿದಿರೆ ಉದ್ಯಮಿ ಶ್ರೀಪತಿ ಭಟ್ ಅವರು ಅಧ್ಯಕ್ಷತೆ ವಹಿಸಿದ್ರು.. ಈ ಸಂದರ್ಭದಲ್ಲಿ ದೇವಸ್ಥಾನದ ಮೇಲ್ಛಾವಣಿಗೆ ತಾಮ್ರದ ಹೊದಿಕೆ ಹಾಸಲು ದೇಣಿಗೆ ಪುಸ್ತಕದ ಪ್ರಥಮ ಪುಸ್ತಕವನ್ನು ಲಕ್ಷ್ಮಿ ನಾರಾಯಣ ಆಸ್ರಣ್ಣರಿಗೆ ಹಸ್ತಾಂತರಿಸಲಾಯಿತು.

ಕ್ಷೇತ್ರದ ವಾಸ್ತು ತಜ್ಞ ಸುಬ್ರಹ್ಮಣ್ಯ ತಂತ್ರಿ ಗುಂಡಿಬಲು, ಕ್ಷೇತ್ರದ ತಂತ್ರಿ ಶ್ರೀಪಾದ ಪಾಂಗಣ್ಣಾಯ, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಪದ್ಮನಾಭ ಕೋಟ್ಯಾನ್, ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮಾಜಿ ಸಚಿವ ಬಿ.ರಮಾನಾಥ ರೈ, ಬಂಟ್ವಾಳ ಶಾಸಕ ರಾಜೇಶ್ ನಾಕ್ ಉಳಿಪಾಡಿಗುತ್ತು, ಮುಂಬಯಿ ಉದ್ಯಮಿ ಗಣೇಶ್ ಶೆಟ್ಟಿ ಐಕಳ, ಮತ್ತಿತರ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Related posts

Leave a Reply

Your email address will not be published. Required fields are marked *