Header Ads
Breaking News

ಬಂಟ್ವಾಳ : ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್ ಸವಾರ ಮೃತ್ಯು

ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಮುಂಜಾನೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಮೆಲ್ಕಾರ್ ಟ್ರಾಫಿಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಮೃತ ಯುವಕನನ್ನು ಬೋಳಂತರು ನಿವಾಸಿ ಉನಾಯಿಸ್ (17) ಎಂದು ಗುರುತಿಸಲಾಗಿದೆ.ಶುಕ್ರವಾರ ಸಂಜೆ ಸುಮಾರು 6 ಗಂಟೆಯ ವೇಳೆ ಮಂಚಿ ಮಸೀದಿಯ ಬಳಿ ಅಪಘಾತ ಸಂಭವಿಸಿದೆ.

ಬೈಕ್ ಚಲಾಯಿಸಿಕೊಂಡು ಬರುತ್ತಿದ್ದ ಉನಾಯಿಸ್ ಮಂಚಿ ಮಸೀದಿಯ ಬಳಿ ಲಾರಿ ವೊಂದನ್ನು ಓವರ್ ಟೇಕ್ ಮಾಡುವ ಭರದಲ್ಲಿ ರಿಕ್ಷಾಕ್ಕೆ ಡಿಕ್ಕಿಹೊಡೆದು ಬಳಿಕ ಲಾರಿಗೆ ಡಿಕ್ಕಿಯಾಗಿ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದ ಎನ್ನಲಾಗಿದೆ. ಕೂಡಲೇ ಈತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗದೆ ಯುವಕ ಮುಂಜಾನೆ ವೇಳೆ ಆಸ್ಪತ್ರೆಯಲ್ಲಿ ಮೃತಪಟ್ಟ ಬಗ್ಗೆ ಕುಟುಂಬ ಮೂಲಗಳು ತಿಳಿಸಿವೆ. ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸೈ.ರಾಜೇಶ್ ಮತ್ತು ಸಿಬ್ಬಂದಿ ಗಳು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

Leave a Reply

Your email address will not be published. Required fields are marked *